ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಅಧಿಕಾರ ನೀಡಿದ್ದು ಸಂವಿಧಾನ: ರಾಮು ಅಗ್ನಿ
ಸಂವಿಧಾನ ದಿನ ಆಚರಣೆ
ಸಿಂದಗಿ 26: ಸ್ವತಂತ್ರ ಸಿಕ್ಕ ನಂತರ ನಮ್ಮ ಆಡಳಿತವನ್ನು ಹೇಗೆ ಮುನ್ನಡೆಸಬೇಕು ಇದಕ್ಕೊಂದು ಸಂವಿಧಾನ ರಚಿಸಲು ಒಂದು ಕರಡು ಸಮಿತಿ ಅದ್ಯಕ್ಷರಾಗಿ ಡಾ ಅಂಬೇಡ್ಕರರನ್ನು ನೇಮಕ ಮಾಡಿ ಹಲವಾರು ದೇಶಗಳ ಗ್ರಂಥಗಳನ್ನು ಅಧ್ಯಯನ ಮಾಡಿ ಸಾವಿಧಾನ ರಚಿಸಿ ಯಾವುದೇ ಒಂದು ಕಟ್ಟಕಡೆಯ ಮನುಷ್ಯನಿಂದ ಉಚ್ಚವಾದ ಮುನುಷ್ಯರವರೆಗೆ ಒಂದು ನ್ಯಾಯ ಸಮಾನತೆಯಿಂದ ಅಧಿಕಾರ ನೀಡಿದ್ದು ಒಂದು ಧರ್ಮ ಗ್ರಂಥವೆಂದರೆ ಅದುವೇ ಧರ್ಮಗ್ರಂಥವೆಂದು ಹೇಳಿದರೆ ತಪ್ಪಾಗದು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಾಮು ಅಗ್ನಿ ಹೇಳಿದರು.
ಪಟ್ಟಣದ ಡಾ. ಅಂಬೇಡ್ಕರ ವೃತ್ತದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡ ಸಂವಿಧಾನ ದಿನ ನಿಮಿತ್ಯ ಹಮ್ಮಿಕೊಂಡ ಸಂವಿಧಾನ ಪಿಠೀಕೆಯನ್ನು ಓದುತ್ತ ಮಾತನಾಡಿ, ಭಾರತದ ಜನಗಳಾದ ನಾವು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಅದರ ಸಮಸ್ತ ನಾಗರಿಕರಿಗೆ; ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ: ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ್ಯ ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ ಅವರಲ್ಲ ಭ್ರಾತೃಭಾವನೆಯನ್ನು ವೃದ್ಧಿಗೊಳಿಸಲು ಶೃದ್ಧಾಪೂರ್ವಕ ಸಂಕಲ್ಪ ಮಾಡಿದವರಾಗಿ; ನಮ್ಮ ಸಂವಿಧಾನ ಸಭೆಯಲ್ಲಿ 1949ನೆಯ ಇಸವಿ ನವೆಂಬರ್ ತಿಂಗಳ ಇಪ್ಪತ್ತಾರನೆಯ ತಾರೀಖಾದ ಈ ದಿವಸ ಈ ಮೂಲಕ ಈ ಸಂವಿಧಾನವನ್ನು ಅಂಗೀಕರಿಸಿ, ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ಇಂದ್ರಾಭಾಯಿ ಬಳಗಾನೂರ, ಸಮಾಜ ಕಲ್ಯಾಣ ಅಧಿಕಾರಿ ಭವಾನಿ ಪಾಟೀಲ, ಕೃಷಿ ಅಧಿಕಾರಿ ಡಾ ಎಚ್.ವೈ.ಸಿಂಗೇಗೋಳ, ಪಿ.ಎಂ.ಜಿ.ಎಸ್ ವೈ ಎ ಇಇ ಜಿ.ವೈ.ಮುರಾಳ, ಸಿಡಿಪಿಓ ಗುರುರಾಜ ಹಿರೇಮಠ, ಅರಣ್ಯ ಅಧಿಕಾರಿ ಮಲಕಣ್ಣನವರ, ಪುರಸಭೆ ಉಪಾಧ್ಯಕ್ಷ ರಾಜಣ್ಣಿ ನಾರಾಯಣಕರ, ಮುಖ್ಯಾಧಿಕಾರಿ ಎಸ್ ರಾಜಶೇಖರ, ಕಂದಾಯ ನೀರೀಕ್ಷ ಐ.ಎಸ್.ಮಕಾನದಾರ, ದ.ಸಂ.ಸ ಜಿಲ್ಲಾ ಸಂಚಾಲಕ ವೈ ಸಿ ಮಯೂರ, ಆರ್ ಎಸ್ ಬನ್ನೇಟ್ಟಿ ಸೇರಿದಂತೆ ಅನೇಕರು ಇದ್ದರು
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 