ಭಾರತದ ಸಂವಿಧಾನ ಅತ್ಯಮೂಲ್ಯ ಕೊಡುಗೆಯಾಗಿದೆ: ಸತ್ರ ನ್ಯಾಯಾಧೀಶರು ಕುಲಕರ್ಣಿ

ಕೊಪ್ಪಳ 27: ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಇತರರ ಸಂಸ್ಥಾಪಕ ಪಿತಾಮಹರ ಅಮೂಲ್ಯ ಕೊಡುಗೆಗೆ ಗೌರವ ಸಲ್ಲಿಸಲು ಪ್ರತಿ ವರ್ಷ ನವೆಂಬರ್ 26 ರಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷದಂತೆ ಈ ವರ್ಷವೂ ದೇಶವು ಸಂವಿಧಾನವನ್ನು ಅಂಗೀಕರಿಸಿದ 70ನೇ ವರ್ಷಚರಣೆಯನ್ನು ಆಚರಿಸುತ್ತಿದ್ದೇವೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಸಂಜೀವ್ ವ್ಹಿ. ಕುಲಕರ್ಣಿ ಅವರು ಹೇಳಿದರು.

ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಪ್ಪಳ ಜಿಲ್ಲಾ ವಕೀಲರ ಸಂಘ, ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಕಾನೂನು ವಿದ್ಯಾಲಯ, ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ (ನ.26) "ಸಂವಿಧಾನ ದಿನ" ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು  ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಅತಿಥಿ ಉಪನ್ಯಾಸಕರಾಗಿ ಆಗಮಿಸಿದ್ದ ಕೊಪ್ಪಳದ ಹಿರಿಯ ವಕೀಲರಾದ ಎ. ವಿ. ಕಣವಿ ಅವರು  ಸಂವಿಧಾನದ ಪೂರ್ವಭಾವಿ ತತ್ವಗಳು, ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳ ಕುರಿತು ಉಪನ್ಯಾಸ ನೀಡಿದರು. 

ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ  ಬಿ.ವಿ. ಸಜ್ಜನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ  ಟಿ. ಶ್ರೀನಿವಾಸ, ಸಿಜೆಎಂ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ಕುಮಾರ ಎಸ್, ಜೆಎಂಎಫ್ಸಿ ಮತ್ತು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಹರೀಶ್ ಪಾಟೀಲ್, ಜೆಎಂಎಫ್ಸಿ ಹಾಗೂ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ  ಮನುಶರ್ಮಾ ,   ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕಿ ಸರ್ವಮಂಗಳ, ಹಿರಿಯ ವಕೀಲರಾದ ಆಸೀಫ್ ಅಲಿ ಹಾಗೂ  ಡಿ.ಬಿ.ಹೆಚ್.ಪಿ.ಎಸ್. ಕಾನೂನು ಮಹಾವಿದ್ಯಾಲಯ ಪ್ರಾಚಾರ್ಯರಾದ  ಡಾ. ಬಿ.ಎಸ್. ಹನಸಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ  ಹಾಗೂ ವಿದ್ಯಾರ್ಥಿನಿಯರು ಮತ್ತು ವಕೀಲರ ಸಂಘದ ವಕೀಲರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.