ರಾಜ್ಯಪಾಲರ ಭಾಷಣದಲ್ಲಿ ಸಾಲಮನ್ನಾ ಪ್ರಸ್ತಾಪವಿಲ್ಲ ಆದರೆ ರೈತರಿಗಾಗಿ ಸಕರ್ಾರ ಬದ್ಧ
ರಾಜ್ಯಪಾಲ ವಿಆರ್ ವಾಲಾ ಅವರು ಸುಮಾರು 19 ಪುಟಗಳ ಸುದೀರ್ಘ ಭಾಷಣ
ಬೆಂಗಳೂರು: ರೈತರ, ಹಿಂದುಳಿದ, ಶೋಷಿತರ, ಮಹಿಳೆಯರ ಅಭಿವೃದ್ಧಿಗೆ ರಾಜ್ಯ ಸಕರ್ಾರ ಕಟಿ ಬದ್ಧವಾಗಿದೆ. ನನ್ನ ಸಕರ್ಾರ ಜನರ ಸಮಸ್ಯೆ ನಿವಾರಣೆಗೆ ಸಿದ್ಧವಾಗಿದೆ ಎಂದು ಮೈತ್ರಿ ಸಕರ್ಾರದ ಮೊದಲ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ವಜೂಭಾಯ್ ವಾಲಾ ಹೇಳಿದರು.
ಸೋಮವಾರ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಕರ್ಾರದ ಮೊದಲ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಚಾಲನೆ ನೀಡಿದರು. ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ.
ಸುಮಾರು 19 ಪುಟಗಳ ಸುದೀರ್ಘ ಭಾಷಣವನ್ನು ರಾಜ್ಯಪಾಲ ವಿಆರ್ ವಾಲಾ ಅವರು ಮಾಡಿದರೂ ಕೂಡಾ ಭಾರೀ ನಿರೀಕ್ಷೆ ಹುಟ್ಟಿಸಿದ್ದ ಸಾಲಮನ್ನಾದ ವಿಚಾರ ಭಾಷಣದಲ್ಲಿ ಪ್ರಸ್ತಾಪ ಆಗಿಲ್ಲ. ಆದರೆ ಪರೋಕ್ಷವಾಗಿ ರೈತರ ಸಾಲಮನ್ನಾದ ಬಗ್ಗೆ ಸುಳಿವು ನೀಡಿದೆ.
ರೈತರೇ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ರೈತರ ಸಮಸ್ಯೆ ನಿವಾರಣೆಗೆ ನನ್ನ ಸಕರ್ಾರ ಬದ್ಧವಾಗಿದೆ. ಅಲ್ಲದೇ ರೈತರು ಇಸ್ರೇಲ್ ಮಾದರಿಯ ಕೃಷಿಯನ್ನು ಅನುಸರಿಸಬೇಕು. ಇದಕ್ಕೆ ಬೇಕಾದ ಪೂರಕ ವಾತಾವರಣವನ್ನು ಸಕರ್ಾರ ಕಲ್ಪಿಸಿಕೊಡಲಿದೆ ಎಂದು ಹೇಳಿದರು.
ಸೈಬರ್ ಕ್ರೈಂ ತಡೆಗೆ ಸೂಕ್ತ ವ್ಯವಸ್ಥೆ ರೂಪಿಸಲಾಗುವುದು. . ಸೈಬರ್ ಅಪರಾಧಿಗಳ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಸಿದ್ಧವಾಗಿದೆ. ಪ್ಲಾಸ್ಟಿಕ್ ನಿಯಂತ್ರಣಕ್ಕೆ ನಿಯಮ ರೂಪಿಸಲಾಗಿದೆ ಎಂದರು.
ಸಾಲಮನ್ನಾ ಬಗ್ಗೆ ಬಜೆಟ್ ವರೆಗೆ ಕಾಯಿರಿ. ಬಜೆಟ್ ನ ಯಾವ ಅಂಶವನ್ನೂ ರಾಜ್ಯಪಾಲರ ಭಾಷಣದಲ್ಲಿ ಸೇರಿಸಿಲ್ಲ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಜುಲೈ 5ರಂದು ಮಂಡಿಸುವ ಬಜೆಟ್ ನಲ್ಲಿ ಸಾಲಮನ್ನಾ ಬಗ್ಗೆ ಘೋಷಿಸುವುದಾಗಿ ಸ್ಪಷ್ಟಪಡಿಸಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 