ಪೊಲೀಸ್ ಇಲಾಖೆಯಲ್ಲಿ 3600 ಖಾಲಿ ಹುದ್ದೆಗಳ ಭರ್ತಿಗೆ ಶೀಘ್ರ ಅಧಿಸೂಚನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್
The Finance Department has approved the proposal of the Home Department.
ಗೃಹ ಇಲಾಖೆಯ ಪ್ರಸ್ತಾವನೆಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ
ಬೆಳಗಾವಿ ಸುವರ್ಣ ವಿಧಾನಸೌಧ ಡಿ.18: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3600 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ರಾಜ್ಯ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಹೇಳಿದರು.
ಪರಿಷತ್ ನಲ್ಲಿ ಪ್ರಶ್ನೋತ್ತರ ವೇಳೆ ಸದಸ್ಯರಾದ ಜಗದೇವ್ ಗುತ್ತೇದಾರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಒಳ ಮೀಸಲಾತಿ ಪ್ರಕ್ರಿಯೇ ಪೂರ್ವದಲ್ಲೇ ಅಧಿಸೂಚನೆ ಆಗಿದ್ದರಿಂದ ಈಗಾಗಲೇ 947 ಪಿಎ??? ಗಳ ಭರ್ತಿ ಪ್ರಕ್ರಿಯೆ ಪೂರ್ಣಗೊಂಡು ಅಭ್ಯರ್ಥಿಗಳು ತರಬೇತಿಯಲ್ಲಿದ್ದಾರೆ. ಒಳ ಮೀಸಲು ಕಲ್ಪಿಸುವ ಪ್ರಕ್ರಿಯೆ ಪೂರ್ಣವಾಗಿದ್ದರಿಂದ ಈಗ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ಚುರುಕುಗೊಂಡಿದೆ.ಸದ್ಯದ ಪರಿಸ್ಥಿತಿಯಲ್ಲಿ 167 ಗೃಹರಕ್ಷಕ ದಳದ ಸಿಬ್ಬಂದಿಯನ್ನು ನೇಮಿಸಿಕೊಂಡಿದ್ದೇವೆ ಎಂದು ತಿಳಿಸಿದರು.ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಅನುದಾನದಡಿಯಲ್ಲಿ ಕಾಳಗಿ ತಾಲೂಕಿನಲ್ಲಿ ಸಿಪಿಐ ಕಚೇರಿ ಕಟ್ಟಡ ಮತ್ತು ಸಿಪಿಐ ಸಿಬ್ಬಂದಿಗೆ ವಸತಿ ಗೃಹ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಸಚಿವರು ಇದೆ ವೇಳೆ ಸದಸ್ಯರ ಪ್ರಶ್ನೆಗೆ ಮಾಹಿತಿ ನೀಡಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 