ನವದೆಹಲಿ, ನ 5: ಅರಬ್ಬೀ ಸಮುದ್ರದಲ್ಲಿ ಕಾಣಿಸಿಕೊಂಡಿರುವ ಮಹಾಚಂಡಮಾರುತ ನಾಡಿದ್ದು ಗುರುವಾರ ಗುಜರಾತ್ ಗೆ ಅಪ್ಪಳಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕುರಿತು ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಕಂದಾಯ ಸಚಿವರು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ವಿಶೇಷವಾಗಿ ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಹಾನಿಯಾಗುವ ಸಾಧ್ಯತೆ ಇರುವ ಕಾರಣ ತಗ್ಗು ಪ್ರದೇಶಗಳಲ್ಲಿ ವಾಸ ಮಾಡುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮಾಡಬೇಕು. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿರುವಂತೆ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ಪರಿಸ್ಥಿತಿ ನಿಭಾಯಿಸಲು ಎನ್ ಡಿ ಆರ್ ಎಫ್ ತಂಡಗಳನ್ನು ಸಿದ್ಧಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು, ಈಗಾಗಲೇ ಸಮುದ್ರಕ್ಕೆ ಹೋಗಿರುವ ಮೀನುಗಾರರು ಕೂಡಲೇ ಹಿಂದಿರುಗಬೇಕೆಂದು ರಾಜ್ಯ ಸರ್ಕಾರ ಸ್ಪಷ್ಟ ಸೂಚನೆ ಕೊಟ್ಟಿದೆ.