ಬೆಂಗಳೂರು, ಜೂನ್ ೮, ರಾಜ್ಯ ಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸುವ ವಿಷಯಕ್ಕೆ ಸಂಬಂಧಿಸಿದಂತೆ ಪಕ್ಷದ ರಾಷ್ಟ್ರೀಯ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ. ಈ ವಿಷಯದಲ್ಲಿ ನಾವು ತಲೆ ಹಾಕುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಪ್ರತಿಕ್ರಿಯಿಸಿದ್ದಾರೆ.ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿಂದು ಪಕ್ಷದ ಶಾಸಕರು, ಸಂಸದರು ಹಾಗೂ ವಿಧಾನಪರಿಷತ್ ಸದಸ್ಯರ ಸಭೆಯ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಾವು ಅಭ್ಯರ್ಥಿಯಾಗಿಸಿದ್ದೇವೆ. ಕಾಂಗ್ರೆಸ್ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಸದ್ಯ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ. ಈ ವಿಷಯದಲ್ಲಿ ನಾವು ತಲೆ ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದರು.