ಬೆಂಗಳೂರು, ಜ 22 : ಐ ಮಾನಿಟರಿ ಅಡ್ವೈಸರಿ (ಐಎಂಎ) ಕಂಪನಿಯ ಬಹುಕೋಟಿ ವಂಚನೆ ಪ್ರಕರಣದ ತನಿಖಾಧಿಕಾರಿಯನ್ನಾಗಿ ಸಿಬಿಐ ಹೈದರಾಬಾದ್ ಘಟಕದ ಜಂಟಿ ನಿರ್ದೇಶಕ ಎ.ವೈ.ವಿ ಕೃಷ್ಣ ಅವರನ್ನು ಮುಂದುವರಿಸುವ ಕುರಿತು ಪರಿಶೀಲಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ.
ಐಎಂಎ ವಂಚನೆ ಕುರಿತು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ , ಎಂದಿನಂತೆ ವಿಚಾರಣೆ ಮುಂದುವರಿಯಲು ಎಂದು ಸೂಚನೆ ನೀಡಿದೆ.
ವಿಚಾರಣೆ ವೇಳೆ ಸಿಬಿಐ ಪರ ವಕೀಲರು, ಎ.ವೈ.ವಿ ಕೃಷ್ಣ ಅವರ ಮುಂದುವರಿಕೆಗೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿರುವ ಸಹಾಯಕ ಸಾಲಿಸಿಟರ್ ಜನರಲ್ ಅವರು, ಈ ಕುರಿತ ಪ್ರಸ್ತಾವನೆ ಕಡತ ಕೇಂದ್ರ ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಸಚಿವಾಲಯದ ಮುಂದಿದೆ ಎಂದು ವಿವರಣೆ ನೀಡಿದರು.