ಕೊಪ್ಪಳ 26: ಕೊಪ್ಪಳ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಪ್ಪಳ ತಾಲ್ಲೂಕಿನ ಚಾಮಲಾಪೂರ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ನವೆಂಬರ್. 20 ರಂದು ಹಮ್ಮಿಕೊಂಡಿದ್ದ ಜನಪರ ಉತ್ಸವ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಪರಣ್ಣ ಮುನವಳ್ಳಿ, ಚಾಮಲಾಪೂರ ಗ್ರಾಮವು ಕಲೆ ಮತ್ತು ಸಾಂಸ್ಕೃತಿಕವಾಗಿ ಅತ್ಯಂತ ಶ್ರೀಮಂತಿಕೆ ಹೊಂದಿದೆ. ಗ್ರಾಮಗಳು ಸಾಮಾಜಿಕವಾಗಿ, ಆಥರ್ಿಕವಾಗಿ ಎಷ್ಟೇ ಬಡತನದಲ್ಲಿದ್ದರೂ ಮಕ್ಕಳಿಗೆ ಶಿಕ್ಷಣ ಕೊಡಿಸುವುದರಿಂದ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯ. ಪಾಲಕರು ಮಕ್ಕಳಿಗಾಗಿ ಆಸ್ತಿ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂದು ಕರೆ ನೀಡಿದರು.
ಭೀಮವ್ವ ದೊಡ್ಡಬಾಳಪ್ಪ ಶಿಳ್ಳಿಕ್ಯಾತರ್ ತೊಗಲುಗೊಂಬೆಯಾಟ, ಮಾರೇಪ್ಪ ದಾಸರ್ ತತ್ವಪದ ಏಕತಾರಿಪದ, ಹನುಮಂತ ಕುಮಾರ್ ಮುಧೋಳ ಕೊಳಲುವಾದನ ಹಾಗೂ ಅನೇಕ ಕಲಾವಿದರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರಾಜೇಂದ್ರಬಾಬು ಜ್ಞಾನಮೂಠೆ, ಚಾಮಲಾಪೂರ ಗ್ರಾ.ಪಂ. ಸದಸ್ಯ ಸಣ್ಣ ಹನುಮಂತಪ್ಪ, ರಂಗಭೂಮಿ ಕಲಾವಿದರಾದ ನಾರಾಯಣಾಚಾರ್ ಜೋಶಿ, ರಾಮನಗೌಡ ದಳಪತಿ, ನಿಂಗಪ್ಪ ಅಗಸಿಮನಿ, ಮಹೇಶ ಸುವರ್ೇ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.