ಬಾಬುಲಾಲ್ ಜೈನ್‌ರನ್ನು ಸೌಹಾರ್ದಯುತ ಭೇಟಿಯಾದ ಸಂಸದ ದಂಪತಿಗಳು
The MP couple paid a cordial visit to Babulal Jain
ಬಾಬುಲಾಲ್ ಜೈನ್‌ರನ್ನು ಸೌಹಾರ್ದಯುತ ಭೇಟಿಯಾದ ಸಂಸದ ದಂಪತಿಗಳು
ಬಳ್ಳಾರಿ 25: ಲೋಕಸಭಾ ಸಂಸದರಾದ ಈ.ತುಕರಾಮ್ ಹಾಗೂ ಅವರ ಪತ್ನಿ ಸಂಡೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅನ್ನಪೂರ್ಣ ಇವರು ಇಂದು ಹೊಸಪೇಟೆ ನಗರದ ನೈರುತ್ಯ ರೈಲ್ವೆ ವಲಯ ಸಲಹಾ ಸಮಿತಿಯ ಹಿರಿಯ ಸದಸ್ಯರಾದ ಬಾಬುಲಾಲ್ ಜೈನ್ ಅವರ ನಿವಾಸಕ್ಕೆ ಸೌಹಾರ್ದಯುತ ಬೇಟಿ ನೀಡಿ ಸನ್ಮಾನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಾಬುಲಾಲ್ ಜೈನ್‌ರವರ ನೇತೃತ್ವದಲ್ಲಿ ವಿಜಯನಗರ ರೈಲ್ವೆ ಬಳಕೆದಾರರ ಸಂಘದ ವತಿಯಿಂದ ಈ ಭಾಗದ ರೈಲ್ವೆ ಬೇಡಿಕೆಗಳ ಮನವಿ ಪತ್ರ ಸಲ್ಲಿಸಲಾಯಿತು.
ಕಳೆದ 06ತಿಂಗಳಿಂದ ಮಂದಗತಿಯಲ್ಲಿ ಸಾಗುತ್ತಿರುವ ಎಲ್.ಸಿ.ಗೇಟ್ ಸಂಖ್ಯೆ:85, ಅನಂತಶಯನಗುಡಿ ರೈಲ್ವೆ ಮೇಲ್‌ಸೇತುವೆ ಕಾಮಗಾರಿಯ ನಿರ್ಮಾಣ ಕಾರ್ಯ ವಿಳಂಬದಿಂದ ಪ್ರವಾಸಿಗರು ಮತ್ತು ಸಾರ್ವಜನಿಕರಿಗೆ ವಿಪರೀತ ಅನಾನುಕೂಲ ಆಗುತ್ತಿದೆ. ಮೇಲ್‌ಸೇತುವೆ ನಿರ್ಮಾಣಕ್ಕಾಗಿ ರಸ್ತೆ ಅಗಲೀಕರಣದಿಂದ ತಮ್ಮ ಮನೆ ಕಳೆದುಕೊಳ್ಳುತ್ತಿರುವ ನಿವಾಸಿಗಳಿಗೆ ರೈಲ್ವೆ ಇಲಾಖೆಯಿಂದ ಮಂಜೂರು ಆಗಿರುವ ಪರಿಹಾರ ಮೊತ್ತವನ್ನು ಬೇಗನೆ ವಿತರಣೆ ಮಾಡಿ ಕಾಮಗಾರಿ ಪೂರ್ಣಗೊಳಿಸಬೇಕು. ಹೊಸಪೇಟೆ ಅಂತರಾಷ್ಟ್ರೀಯ ಪ್ರವಾಸಿ ತಾಣವಾಗಿದ್ದು, ದೇಶ ವಿದೇಶದಿಂದ ಅಸಂಖ್ಯಾತ ಪ್ರವಾಸಿಗರು ರೈಲ್ವೆ ಮೂಲಕ ಆಗಮಿಸುತ್ತಿದ್ದಾರೆ. ಆದುದ್ದರಿಂದ ಹೊಸಪೇಟೆ ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ ಹೆಚ್ಚುವರಿಯಾಗಿ ನೂತನ ಪ್ಲಾಟ್ ಫಾರಂಗಳನ್ನು ನಿರ್ಮಿಸಿ ರೈಲ್ವೆ ಟರ್ಮಿನಲ್ ಸೌಲಭ್ಯ ವದಗಿಸಬೇಕು.
ಹೊಸಪೇಟೆ ಮಾರ್ಗವಾಗಿ ವಾರದಲ್ಲಿ ಎರಡು ದಿನ ಸಂಚರಿಸುತ್ತಿರುವ ಹುಬ್ಬಳ್ಳಿ-ಹೊಸಪೇಟೆ-ಚನೈ ಗಾಡಿ ಸಂಖ್ಯೆ : 17313/17314 ರೈಲನ್ನು ಪ್ರತಿನಿತ್ಯ ಸಂಚರಿಸುವಂತೆ ಕ್ರಮ ಕೈಗೊಳ್ಳಬೇಕು. ಉತ್ತರ ಕರ್ನಾಟಕದಿಂದ ಮಂತ್ರಾಲಯ, ರಾಯಚೂರು ಕಡೆಗೆ ತೆರಳುವ ಭಕ್ತಾದಿಗಳು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ರದ್ದುಪಡಿಸಿರುವ ಗಾಡಿ ಸಂಖ್ಯೆ:07335/07336 ಬೆಳಗಾಂ-ಹೈದ್ರಬಾದ್-ಮಣಗೂರು ರೈಲನ್ನು ಪುನರ್ ಆರಂಭಿಸಬೇಕು.
ಕರಾವಳಿ ಹಾಗೂ ಕಲ್ಯಾಣ ಕರ್ನಾಟಕದ ನಡುವೆ ನೇರ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಕೊಟ್ಟೂರು-ದಾವಣಗೆರೆ ಮಾರ್ಗವಾಗಿ ಹೊಸಪೇಟೆಯಿಂದ ಮಂಗಳೂರಿಗೆ ನೇರ ರೈಲು ಸಂಪರ್ಕ ಕಲ್ಪಿಸುವ ಅಗತ್ಯವಿದೆ. ಇದರಿಂದ ವಿಶ್ವ ಪಾರಂಪರಿಕ ತಾಣವಾದ ಹಂಪಿ-ಬೇಲೂರು ಹಳೆಬೀಡು-ಶ್ರವಣ ಬೆಳಗೋಳ-ಧರ್ಮಸ್ಥಳ-ಹಾಗೂ ಕುಕ್ಕೆಸುಬ್ರಮಣ್ಯ ನಡುವೆ ಸಂಪರ್ಕ ಉಂಟಾಗಿ ಪ್ರವಾಸೋಧ್ಯಮದ ಬೆಳವಣಿಗೆ ಆಗುತ್ತದೆ. ಹಾಗೂ ಶೈಕ್ಷಣಿಕ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಉನ್ನತ ವ್ಯಾಸಾಂಗಕ್ಕೆ ತೆರಳುವ ಕಲ್ಯಾಣ ಕರ್ನಾಟಕ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.
ಹೊಸಪೇಟೆ-ಮುಂಬೈ (ಸಿಎಸ್‌ಟಿಎಂ) ಗಾಡಿ ಸಂಖ್ಯೆ : 11139/11140, ಹಳೇ ಕೋಚ್‌ಗಳನ್ನು ಬದಲಾಯಿಸಿ, ಪೂರ್ಣ ಪ್ರಮಾಣದ ಎಲ್.ಹೆಚ್.ಬಿ.ಕೋಚ್‌ಗಳಾಗಿ ಪರಿವರ್ತಿಸಬೇಕು. ಈ ಸಂದರ್ಭದಲ್ಲಿ ವಿಜಯನಗರ ರೈಲ್ವೆ ಬಳಕೆದಾರರ ಸಂಘದ ವೈ.ಯಮುನೇಶ್, ಮಹೇಶ್‌ಕುಡುತಿನಿ, ನಗರಸಭೆ ಸದಸ್ಯರಾದ ಮಂಜುನಾಥ, ಬ್ರಾಹ್ಮಣ ಸಮಾಜದ ದಿವಾಕರ್, ಶ್ರೀಮತಿ ಆಶಲತಾಸೋಮಪ್ಪ ಹಾಗೂ ಜೈನ್‌ಸಮಾಜದ ಮುಖಂಡರಾದ ಮಗನ್‌ಲಾಲ್‌ಜೀ, ಕೇಸರಿಲಾಲ್‌ಜೀ, ಮಹೇಂದ್ರಕುಮಾರ್, ಕಾಂತಿಲಾಲ್, ನವರತನ್‌ಮಲ್, ಮಹೇಂದರ್‌ಕಾನುಂಗಾ, ಮಹಾಂಗಿಲಾಲ್, ಅಶೋಕ್‌ಜೈನ್ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 