ಫೆ.18 ರಿಂದ ಮುಗ್ಧ ಸಂಗಮೇಶ್ವರರ ಮಹಾಪುರಾಣ ಪ್ರಾರಂಭ
The Mahapurana of Mugdha Sangameshwara begins from Feb. 18
ತಾಳಿಕೋಟಿ 17: ಕಲಕೇರಿ ಹಿರೇಮಠದಲ್ಲಿ ಫೆ.18 ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆತಾಳಿಕೋಟೆ: ತಾಲ್ಲೂಕಿನ ಕಲಕೇರಿ- ಗ್ರಾಮದ ಗುರುಮರುಳಾರಾಧ್ಯರ ಸಂಸ್ಥಾನ ಹಿರೇಮಠದ ಅವರಣದಲ್ಲಿ ಲಿಂ.ಬಸವಲಿಂಗ ಮರುಳಸಿದ್ಧ ಶಿವಾಚಾರ್ಯರ ಪುಣ್ಯ ಸ್ಮರಣೋತ್ಸವದ ನಿಮಿತ್ತ ಫೆ.18 ರಿಂದ ಮಾ.09ರ ವರೆಗೆ ಉಪ್ಪಲದಿನ್ನಿಯ ಮುಗ್ಧ ಸಂಗಮೇಶ್ವರರ ಮಹಾಪುರಾಣ, ಸಾಧಕರಿಗೆ ಸನ್ಮಾನ ಮತ್ತು ಪ್ರಶಸ್ತಿ ಪುರಸ್ಕಾರ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರೀಮಠದ ಸಿದ್ಧರಾಮ ಶಿವಾಚಾರ್ಯರ ಅಧ್ಯಕ್ಷತೆಯಲ್ಲಿ ನಡೆಯಲಿವೆ.
ಫೆ.18 ರಂದು ಬುಧವಾರ ಸಂಜೆ 7.00 ಘಂಟೆಗೆ ಪುರಾಣದ ಪ್ರಾರಂಭೋತ್ಸವ ಸಮಾರಂಭ ನಡೆಯಲಿದ್ದು ಮಾಗಣಗೇರಿ ಬೃಹನ್ಮಠದ ಶಿವಾಚಾರ್ಯರತ್ನ ವಿಶ್ವರಾಧ್ಯ ಶಿವಾಚಾರ್ಯರು, ಜಳಕೋಟ ಕಟ್ಟಿಮಠ ಸಂಸ್ಥಾನದ ಶಿವಾನಂದ ಶಿವಾಚಾರ್ಯರು ಮತ್ತು ಹಲಕರ್ಟಿಯ ಕಟ್ಟಿಮನಿ ಹಿರೇಮಠದ ಅಭಿನವ ಮುನೀಂದ್ರ ಶಿವಾಚಾರ್ಯರು ಸಾನಿಧ್ಯ ವಹಿಸುವರು. ಕಲಕೇರಿಯ ಗದ್ದುಗೆಮಠದ ಗುರುಮಡಿವಾಳೇಶ್ವರ ಶಿವಾಚಾರ್ಯರು ನೇತೃತ್ವವನ್ನು, ಹಿರೇಮಠದ ಸಿದ್ಧರಾಮ ಶಿವಾಚಾರ್ಯರು ಅಧ್ಯಕ್ಷತೆವಹಿಸುವರು. ಕೆರೂಟಗಿ ಸಿದ್ಧರಾಮೇಶ್ವರಮಠದ ಶಿವಬಸವ ಶಿವಾಚಾರ್ಯರು, ಕಲಕೇರಿ ವಿರಕ್ತಮಠದ ಶಿವಯೋಗಿ ದೇವರು, ಚಬನೂರ ಹಿರೇಮಠದ ರಾಮಲಿಂಗಯ್ಯ ಸ್ವಾಮಿಗಳು ಸಮ್ಮುಖ ವಹಿಸುವರು.
ದೇವರಹಿಪ್ಪರಗಿ ಶಾಸಕರಾದ ರಾಜುಗೌಡ ಪಾಟೀಲ ಕುದರಿಸಾಲೋಡಗಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಜ್ಯೋತಿ ಬೆಳಗಿಸುವರು. ಮುಖ್ಯ ಅತಿಥಿಗಳಾಗಿ ಅನುಗ್ರಹ ಕಣ್ಣಿನ ಆಸ್ಪತ್ರೆಯ ಪ್ರಭುಗೌಡ ಬ.ಪಾಟೀಲ, ಕೆಪಿಸಿಸಿ ಸದಸ್ಯ ಬಿ.ಎಸ್.ಪಾಟೀಲ ಯಾಳಗಿ, ಎಬಿಡಿ ಫೌಂಡೇಶನ್ನ ಆನಂದ.ಬ.ದೊಡಮನಿ, ಬಿಜೆಪಿ ಮುಖಂಡರಾದ ಪ್ರಭುಗೌಡ ಬಿರಾದಾರ ಅಸ್ಕಿ, ಸಿದ್ದು ಬುಳ್ಳಾ ಸೇರಿದಂತೆ ಇತರರು ಉಪಸ್ಥಿತರಿರುವರು.ಫೆ.22 ರಂದು ತೊಟ್ಟಿಲೋತ್ಸವ ಕಾರ್ಯಕ್ರಮ, ಫೆ.25 ರಂದು ಧರ್ಮ, ಪರಂಪರೆ, ಸಂಸ್ಕೃತಿ ಉಳಿವಿನಲ್ಲಿ ಭಕ್ತರ ಪಾತ್ರ ವಿಶೇಷ ಉಪನ್ಯಾಸ ಕಾರ್ಯಕ್ರಮ, ಮಾ.01 ರಂದು ರೇಣುಕಾಚಾರ್ಯರ ಜಯಂತಿ ಹಾಗೂ ವಿಶೇಷ ಸನ್ಮಾನ ಕಾರ್ಯಕ್ರಮ, ಮಾ.08ರಂದು ಶ್ರೀಶೈಲ ಶ್ರೀ ಪಾವನ ಸಾನಿಧ್ಯದಲ್ಲಿ ಪುರಾಣ ಮಹಾಮಂಗಲ, ಧರ್ಮಸಭೆ ಹಾಗೂ 2026ನೇ ಸಾಲಿನ ಶ್ರೀ ಗುರುಮರುಳಾರಾಧ್ಯ ಸಿರಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುವುದು.ಮಾ.09 ರಂದು ಶಿವದೀಕ್ಷೆ, ಅಯ್ಯಾಚಾರ ಕಾರ್ಯಕ್ರಮಗಳು ನಡೆಯಲಿವೆ ಎಂದು ಗುರುಮರುಳಾರಾಧ್ಯರ ಹಿರೇಮಠದ ಪಟ್ಟಾಧ್ಯಕ್ಷರಾದ ಸಿದ್ಧರಾಮ ಶಿವಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಲಕೇರಿ ಹಿರೇಮಠದ ಸಿದ್ದರಾಮ ಶಿವಾಚಾರ್ಯರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 