ಪೋಕ್ಸೋ ಕಾಯ್ದೆ ತಿಳಿದುಕೊಳ್ಳಬೇಕು ಹಾಗೂ ಸಂತ್ರಸ್ಥರಿಗೆ ಧೈರ್ಯ ನೀಡಬೇಕು
The POCSO Act should be understood and victims should be encouraged.
ಲೋಕದರ್ಶನ ವರದಿ
ಹಾವೇರಿ 22 : ಪೋಕ್ಸೋ ಕಾಯ್ದೆ ಬಗ್ಗೆ ತಿಳಿದುಕೊಳ್ಳಬೇಕು ಹಾಗೂ ಸಂತ್ರಸ್ಥರಿಗೆ ಧೈರ್ಯ ತುಂಬುವ ಮೂಲಕ ಪಟ್ಟಭದ್ರ ಹಿತಾಸಕ್ತಿಗಳು ಸಾಕ್ಷಿ ನಾಶಪಡಿಸದಂತೆ, ಸಂತ್ರಸ್ಥರು ಧೈರ್ಯವಾಗಿ ಹೇಳಿಕೆ ನೀಡುವಂತೆ ತಿಳುವಳಿಕೆ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿರಾದಾರ ದೇವಿಂದ್ರ್ಪ ಎನ್. ಅವರು ಹೇಳಿದರು.
ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಭವನದಲ್ಲಿ ಬುಧವಾರ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಪೋಕ್ಸೋ ಕಾಯ್ದೆ -2012ರ ನಿಯಮ 39ರ ಅಡಿಯಲ್ಲಿ ಸಂತ್ರಸ್ಥ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಾಗಿ ಆಯ್ಕೆಯಾಗಿರುವ ಓರಿಯಂಟೇಶನ್ ತರಬೇತಿ ಕಾರ್ಯಾಗಾರ ಹಾಗೂ ಬಾಲ್ಯ ವಿವಾಹ ನಿಷೇಧ, ವರದಕ್ಷಿಣೆ ನಿಷೇಧ, ಮಾನವ ಕಳ್ಳ ಸಾಗಾಣಿಕೆ ಕುರಿತು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೆಲವು ಪೋಕ್ಸೋ ಪ್ರಕರಣಗಳಲ್ಲಿ ಸಂತ್ರಸ್ಥರು ಹಣದ ಆಸೆಯಿಂದ ಪ್ರಕರಣದಿಂದ ಹಿಂದೆ ಸರಿದ ಉದಾಹರಣೆಗಳಿವೆ. ಆದ್ದರಿಂದ ಇಂತಹ ಪ್ರಕರಣಗಳಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಬಹಳ ಮುಖ್ಯವಾಗಿದೆ. ಜೊತೆಗೆ ಬಾಲ್ಯ ವಿವಾಹ ನಿಷೇಧ, ವರದಕ್ಷಿಣೆ, ಮಾನವ ಕಳ್ಳ ಸಾಗಾಣಿಕೆ ಕುರಿತು ಸಮಾಜದಲ್ಲಿ ಕಾನೂನಿನ ಅರಿವು ಮೂಡಿಸಿದಾಗ ಇಂತಹ ಪ್ರಕರಣಗಳ ಸಂಖ್ಯೆ ಕಡಿಮೆಯಾಗಲು ಸಾಧ್ಯ ಎಂದು ಹೇಳಿದರು.
ಪೋಕ್ಸೋ ಕಾಯ್ದೆ -2012ರ ನಿಯಮ 39ರ ಅಡಿಯಲ್ಲಿ ಸಂತ್ರಸ್ಥ ಮಕ್ಕಳಿಗಾಗಿ ಬೆಂಬಲ ವ್ಯಕ್ತಿಗಳನ್ನಾಗಿ ಪಿಎಲ್‌ವಿ ಹಾಗೂ ಆಸಕ್ತಿ ಇರುವ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದೆ. ನಿಮಗೆ ತರಬೇತಿ ನೀಡಿದಾಗ ಮಾತ್ರ ನೀವು ಪೋಕ್ಸೋ ಸಂತ್ರಸ್ಥರಿಗೆ ನಿಜವಾದ ಬೆಂಬಲ ವ್ಯಕ್ತಿಗಳಾಗಲು ಸಾಧ್ಯ. ಹಾಗಾಗಿ ಈ ತರಬೇತಿ ಹಮ್ಮಿಕೊಳ್ಳಲಾಗಿದೆ, ನೀವೆಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಗೀತಾ ಪಾಟೀಲ ಅವರು ಪೋಕ್ಸೋ ಕಾಯ್ದೆ -2012ರ, ಬೆಂಬಲ ವ್ಯಕ್ತಿಗಳ ಕರ್ತವ್ಯ, ಬಾಲ್ಯ ವಿವಾಹ ನಿಷೇಧ, ವರದಕ್ಷಿಣೆ ನಿಷೇಧ, ಮಾನವ ಕಳ್ಳ ಸಾಗಾಣಿಕೆ ಕುರಿತು ಉಪನ್ಯಾಸ ನೀಡಿದರು.
ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲಜಾ ಎಚ್.ವಿ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 