ಬೆಂಗಳೂರು 25: ಪ್ರಧಾನಿ ನರೇಂದ್ರ ಮೋದಿ ಅವರು ಕ್ರೈಸ್ತ ಬಾಂಧವರಿಗೆ ಕ್ರಿಸ್‌ಮಸ್ ಹಬ್ಬದ ಶುಭಾಶಯ ಕೋರಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸಂದೇಶವನ್ನು ಹಂಚಿಕೊಂಡಿರುವ ಅವರು, ಭಗವಾನ್ ಜೀಸಸ್ ಅವರು ಹಾಕಿಕೊಟ್ಟ ಮಾರ್ಗಗಳಲ್ಲಿ ನಾವು ಸಾಗಬೇಕಿದೆ. ಆ ಮೂಲಕ ಶಾಂತಿ, ಸಹಬಾಳ್ವೆ, ಸಮೃದ್ಧಿಯನ್ನು ಸಾಧಿಸಬೇಕಿದೆ ಎಂದು ಹೇಳಿದ್ದಾರೆ.
ಸೋಮವಾರ ಭಾರತದ ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಭಾಗವಹಿಸಿದ ಪ್ರಧಾನಿ ತಮ್ಮ ಭಾಷಣದಲ್ಲಿ ಯೇಸುಕ್ರಿಸ್ತನ ಬೋಧನೆಗಳಿಗೆ ಅನುಗುಣವಾಗಿ ಪ್ರೀತಿ, ಸಾಮರಸ್ಯ ಮತ್ತು ಸಹೋದರತ್ವದ ಮನೋಭಾವವನ್ನು ಬಲಪಡಿಸುವ ಮಹತ್ವವನ್ನು ಒತ್ತಿ ಹೇಳಿದರು.