ಶರಣರು ಹಾಕಿಕೊಟ್ಟ ತತ್ವ ಆದರ್ಶಗಳ ಹಾದಿಯಲ್ಲಿ ನಡೆಯಬೇಕು

ಬಾಗಲಕೋಟೆ11: ಶರಣರು ಹಾಕಿಕೊಟ್ಟ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರು ಹಾಕಿಕೊಟ್ಟ ಹಾದಿಯನ್ನು ನಾವೆಲ್ಲರೂ ನಡೆಯುವ ಅಗತ್ಯವಿದೆ ಎಂದು ಜಿ.ಪಂ ಉಪಾಧ್ಯಕ್ಷ ಮುತ್ತಪ್ಪ ಕೋಮಾರ ಹೇಳಿದರು.

ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡ ಸವಿತಾ ಮಹಷರ್ಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸವಿತಾ ಮಹಷರ್ಿಯವರು ಮಾನವತಾವಾದಿ ಹಾಗೂ ಸಮಾಜ ಸುಧಾರಕರಾಗಿದ್ದು, ಸಾಮಾಜಿಕ ಕ್ಷೇತ್ರದಲ್ಲಿ ಅವರ ಕೊಡುಗೆ ಅಪಾರ. ಅವರ ಆದರ್ಶಗಳು ಎಲ್ಲರಿಗೂ ಮಾರ್ಗದಶರ್ಿಯಾಗಿವೆ ಎಂದು ತಿಳಿಸಿದರು.

ಸವಿತಾ ಸಮಾಜವು ಸಣ್ಣ ಸಮುದಾಯವಾಗಿರುವದರಿಂದ ಈ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಸರಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದರು. ಈ ಸಮುದಾಯದವರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ತಮ್ಮ ಮಕ್ಕಳಿಗೆ ಶಿಕ್ಷಣವನ್ನು ಕೊಡಿಸುವ ಮೂಲಕ ಸಮಾಜ ಸಂಘಟನೆ, ಒಳ್ಳೆಯವರನ್ನು ಗುರುತಿಸುವ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಕೆಲಸವಾಗಬೇಕು. ಸಮುದಾಯದವರು ಪ್ರತಿಭಾವಂತರಾಗಿ ಹೊರಹೊಮ್ಮುವಂತಾಗಬೇಕು ಎಂದರು.

ತಾಲೂಕ ಪಂಚಾಯತ ಅಧ್ಯಕ್ಷರಾದ ಚೆನ್ನನಗೌಡರ ಪರನಗೌಡರ ಮಾತನಾಡಿ ವೃತ್ತಿಯಲ್ಲಿ ಸರ್ವರು ಸಮಾನರು. ಒಂದು ವೃತ್ತಿಯಿಂದ ವ್ಯಕ್ತಿಯ ವ್ಯಕ್ತಿತ್ವ ಅಳತೆ ಮಾಡಬಾರದು. ಸಮಾಜದಲ್ಲಿ ಅತ್ಯಂತ ಕಡಿಮೆ ಜನಸಂಖ್ಯೆ ಹೊಂದಿದ ಸಮುದಾಯವೆಂದರೆ ಸವಿತಾ ಸಮಾಜವಾಗಿದು ಎಂದು ತಿಳಿಸಿದರು.

 ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಕಟಗೇರಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಆರ್.ಕೆ.ಗೋಗಿ ಮಾತನಾಡಿ ಈ ಸಮಾಜವು ಅತ್ಯಂತ ಪುರಾತನವಾದ ಸಮುದಾಯವಾಗಿದೆ. ಪ್ರಾಚೀನ ಕಾಲದಿಂದಲೂ ತಮ್ಮ ವೃತ್ತಿಯನ್ನೇ ಆಧಾರವಾಗಿಟ್ಟುಕೊಂಡು ಬದುಕುತ್ತಿರುವ ಈ ಸವಿತಾ ಸಮಾಜ ಇಂದು ಸಾಮಾಜಿಕ ಕ್ಷೇತ್ರದಲ್ಲಿ, ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಹೆಸರನ್ನು ಮಾಡಬೇಕಿದೆ. ಅದಕ್ಕಾಗಿ ಯುವಕರು ಎಚ್ಚೆತ್ತುಕೊಳ್ಳಬೇಕು ಎಂದರು. 

  ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಮಹಾದೇವ ಮುರಗಿ ಸೇರಿದಂತೆ ಸಮಾಜದ ಮುಖಂಡರಾದ ಗೋಪಾಲಕೃಷ್ಣ ಹಳ್ಳಕಟ್ಟಿ, ಶರಣಪ್ಪ ಗೋಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಸಹಾಯಕ ನಿದರ್ೇಶಕರಾದ ಬಸವರಾಜ ಶಿರೂರ ಸ್ವಾಗತಿಸಿ ಕೊನೆಗೆ ವಂದಿಸಿದರು.  ಕಾರ್ಯಕ್ರಮ ಪೂರ್ವದಲ್ಲಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಸವಿತಾ ಮಹಷರ್ಿ ಅವರ ಭಾವಚಿತ್ರಕ್ಕೆ ಶಾಸಕ ವೀರಣ್ಣ ಚರಂತಿಮಠ ಮತ್ತು ತಾ.ಪಂ ಅಧ್ಯಕ್ಷ ಚನ್ನನಗೌಡರ ಪರನಗೌಡರ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆ ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ನಗರದ ನಾನಾ ಕಡೆ ಸಂಚರಿಸಿ ಅಂಬೇಡ್ಕರ ಭವನಕ್ಕೆ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾವಿದರು ಪಾಲ್ಗೊಂಡಿದ್ದವು. ಅನೇಕ ಕುಂಬ ಹೊತ್ತ ಮಹಿಳೆಯರು ಮೆರಣಿಗೆಯ ಕೇಂದ್ರಬಿಂದು ಆಗಿದ್ದರು.ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಗರಿಮಾ ಪನ್ವಾರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.