ಬೆಂಗಳೂರು, ಏಪ್ರಿಲ್ 10 (ಯುಎನ್ಐ) ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದಲ್ಲಿರುವ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿಂದು, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಕಾರ್ಮಿಕ ಸಹಾಯಹಸ್ತ ಯೋಜನೆಯಡಿ ಹಮ್ಮಿಕೊಳ್ಳಲಾಗಿರುವ ಅಸಂಘಟಿತ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಜಗದೀಶ್. ಕೆ.ನಾಯಕ್ ಅವರು ಕಾರ್ಮಿಕರಿಗೆ ಮಾಸ್ಕ್, ಸ್ಯಾನಿಟೈಜರ್ ಹಾಗೂ ಸೋಪ್ ವಿತರಿಸುವ ಮೂಲಕ ಚಾಲನೆ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಎನ್.ಎಸ್.ಮಹೇಶ್, ವಾರ್ತಾ ಸಹಾಯಕಿ ಹೇಮಾವತಿ.ಜೆ, ಕಾರ್ಮಿಕ ಇಲಾಖೆ ಕಾರ್ಮಿಕ ನಿರೀಕ್ಷಕ ಪ್ರದೀಪ್, ಬಾಲ ಕಾರ್ಮಿಕ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಬಾರಾವ್, ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.