ನವದೆಹಲಿ 24: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ2 ಆರೋಪಿ ನಟ ದರ್ಶನ್ ತೂಗುದೀಪ, ಎ1 ಆರೋಪಿ ಪವಿತ್ರಾ ಗೌಡ ಮತ್ತು ಇತರ ಐದು ಜನರಿಗೆ ನೀಡಲಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಆದರೆ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಆಕ್ಷೇಪಣೆ ಅರ್ಜಿಯನ್ನು ಪರಿಶೀಲಿಸಲು ಒಪ್ಪಿಕೊಂಡಿದೆ.
ಇದೇ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್‌ನ ಜಾಮೀನು ಆದೇಶದ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ಕುರಿತು ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲ ಮತ್ತು ಆರ್ ಮಹಾದೇವನ್ ಅವರನ್ನೊಳಗೊಂಡ ಪೀಠವು ದರ್ಶನ್ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.
ರಾಜ್ಯ ಸರ್ಕಾರವು ಆರೋಪಿಗಳಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಮನವಿ ಮಾಡಿಕೊಂಡಿರುವುದರಿಂದ ಆದೇಶದ ಕಾರ್ಯಾಚರಣೆಗೆ ತಡೆ ನೀಡುವುದು ಸೂಕ್ತವಲ್ಲ ಏಕೆಂದರೆ ಅದು ಜಾಮೀನು ರದ್ದತಿಗೆ ಸಮನಾಗಿರುತ್ತದೆ. ಆದರೆ, ಪ್ರಾಸಿಕ್ಯೂಷನ್ ನ ಹಿತಾಸಕ್ತಿ ರಕ್ಷಣೆಗೆ ಸಹ ಆರೋಪಿಗಳು ಜಾಮೀನಿನ ಮೇಲೆ ಅರ್ಜಿ ಸಲ್ಲಿಸಿದರೆ, ಸಂಬಂಧಪಟ್ಟ ನ್ಯಾಯಾಲಯವು ನಮ್ಮ ಮುಂದೆ ಪ್ರಶ್ನಿಸಲಾದ ಆದೇಶವನ್ನು ಅವಲಂಬಿಸಬಾರದು. ಸಲ್ಲಿಸಿದ ಯಾವುದೇ ಜಾಮೀನು ಅರ್ಜಿಯನ್ನು ಅದರ ಅರ್ಹತೆಯ ಮೇಲೆಯೇ ನಿರ್ಧರಿಸಲಾಗುತ್ತದೆ ಎಂದು ಪೀಠ ಹೇಳಿದೆ.
.