ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ನಾಗರಿಕರಿಗೆ ವಿಶೇಷಾಧಿಕಾರ ನೀಡಿರುವ ಸಂವಿಧಾನದ ಕಲಂ 35ಎ ಅನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅಜರ್ಿಯ ವಿಚಾರಣೆಯನ್ನು ಸುಪ್ರೀಂ ಕೋಟರ್್ ಮುಂದೂಡಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಪಂಚಾಯಿತಿ ಮತ್ತು ಮುನ್ಸಿಪಲ್ ಕಾಪರ್ೊರೇಷನ್ ಚುನಾವಣೆ ಇರುವುದರಿಂದ ಕಲಂ 35ಎ ಪ್ರಶ್ನಿಸಿ ಸಲ್ಲಿಸಲಾಗಿರುವ ಅಜರ್ಿಗಳ ವಿಚಾರಣೆಯನ್ನು ಮುಂದೂಡುವಂತೆ ಕೇಂದ್ರ ಸಕರ್ಾರ ಮಾಡಿದ್ದ ಅಜರ್ಿಗೆ ಮನ್ನಣೆ ನೀಡಿ ಸವರ್ೊಚ್ಛ ನ್ಯಾಯಾಲಯ ಸಾರ್ವಜನಿಕ ಹಿತಾಸಕ್ತಿ ಅಜರ್ಿಯ ವಿಚಾರಣೆಯನ್ನು ಆಗಸ್ಟ್ 27ಕ್ಕೆ ಮುಂದೂಡಿದೆ.
ಸುಪ್ರೀಂ ಕೋಟರ್್ ಮುಖ್ಯ ನ್ಯಾಯಾಧೀಶರಾದ ಸಿಜೆಐ ದೀಪಕ್ ಮಿಶ್ರಾ ಹಾಗೂ ನ್ಯಾಯಮೂತರ್ಿ ಎಎಂ ಖಾನ್ವಿಲ್ಕರ್ ಅವರು ವಿಚಾರಣೆಯನ್ನು ಆಗಸ್ಟ್ 27ಕ್ಕೆ ಮುಂದೂಡಿದರು.
ಇನ್ನು ಜಮ್ಮು ಮತ್ತು ಕಾಶ್ಮೀರ ನಾಗರಿಕರಿಗೆ ವಿಶೇಷ ಹಕ್ಕು ನೀಡಿರುವ ಸಂವಿಧಾನದ ಕಲಂ 35ನ ವಾಸ್ತವಿಕತೆ ಮತ್ತು ಪ್ರಸ್ತುತತೆಯನ್ನು ಪ್ರಶ್ನಿಸಿ ಸುಪ್ರೀಂ ಕೋಟರ್್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅಜರ್ಿ ಸಲ್ಲಿಕೆ ಮಾಡಲಾಗಿತ್ತು. ಅಜರ್ಿಯಲ್ಲಿ 'ದೇಶದ ಯಾವುದೇ ಭಾಗದಲ್ಲಿ ಆಸ್ತಿ ಹೊಂದಲು ಮತ್ತು ವಾಸ ಮಾಡಲು ಭಾರತದ ನಾಗರಿಕರಿಗೆ ಮೂಲಭೂತ ಹಕ್ಕಿದೆ.
ಇದನ್ನು 35ಎ ಉಲ್ಲಂಘಿಸುತ್ತದೆ. ಅಲ್ಲದೆ, ದೇಶದ ಸಂವಿಧಾನಕ್ಕೆ ಸಂಸತ್ ನಲ್ಲಿ ಮಾತ್ರ ತಿದ್ದುಪಡಿ ತರಲು ಸಾಧ್ಯ. ಆದರೆ 35ಎಯನ್ನು ಸಂಸತ್ ನ ಹೊರಗೆ, ರಾಷ್ಟ್ರಪತಿಗಳು ವಿಶೇಷಾಧಿಕಾರ ಬಳಸಿ ಅಧಿಸೂಚನೆ ಹೊರಡಿಸಿದ್ದಾರೆ ಎಂಬುದು ಅಜರ್ಿದಾರರು ಹೇಳಿದ್ದಾರೆ.
ಅಂತೆಯೇ ಈ ವಿಚಾರಕ್ಕೆ ಕಾಶ್ಮೀರವೂ ಸೇರಿದಂತೆ ದೇಶಾದ್ಯಂತ ಪರ-ವಿರೋಧ ಚಚರ್ೆಗಳು ಆರಂಭವಾಗಿವೆ.