ಕನ್ಹೇರಿ ಮಠದ ಕ್ರಿಮಿನಲ್ ಹಿನ್ನೆಲೆಯುಳ್ಳ ಸ್ವಾಮಿ ಸ್ವಾಮೀನೇ ಅಲ್ಲ
The Swami of Kanheri Math with a criminal background is not Swami at all
ಕನ್ಹೇರಿ ಮಠದ ಕ್ರಿಮಿನಲ್ ಹಿನ್ನೆಲೆಯುಳ್ಳ ಸ್ವಾಮಿ ಸ್ವಾಮೀನೇ ಅಲ್ಲ.
ವಿಜಯಪುರ 14 : ಸ್ವಾಮಿಯ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಜೈಲಿಗೆ ಅಟ್ಟಬೇಕು. ಮಾನಹಾನಿಕರ ಮತ್ತು ಸಮುದಾಯ ಭದ್ರತೆಗೆ ಹಾನಿಕಾರಕವಾದ ಹೇಳಿಕೆಯ ಬಗ್ಗೆ ದೂರು ದಾಖಲಿಸಿ ಮತ್ತು ಜಿಲ್ಲಾ ಪ್ರವೇಶ ನಿಷೇಧಿಸಬೇಕೆಂದು ಒತ್ತಾಯಿಸಿ ವಿಜಯಪುರ ಜಾಗತಿಕ ಲಿಂಗಾಯತ ಮಹಾಸಭಾ ಪದಾಧಿಕಾರಿಗಳು ಮತ್ತು ಬಸವಾದಿ ಅಭಿಮಾನಿಗಳು ವಿಜಯಪುರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಿಗೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಜಯಪುರ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷರಾದ ಬಸನಗೌಡ ಹರನಾಳ ಹಾಗೂ ಅಖಂಡ ಕರ್ನಾಟಕ ರೈತ ಸಂಘದ ಮುಖಂಡರಾದ ಅರವಿಂದ ಕುಲಕರ್ಣಿ ಜಂಟಿಯಾಗಿ ಮಾತನಾಡಿ, ದಿನಾಂಕ 09.10.2015 ರಂದು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಬೀಳೂರ ಗ್ರಾಮದ ಬಸವ ಪರಂಪರೆಯ ವಿರಕ್ತ ಮಠದ ಸಾರ್ವಜನಿಕ ಸಭೆಯಲ್ಲಿ ಮಹಾರಾಷ್ಟ್ರದ ಕೊಲ್ಲಾಪುರ ಹತ್ತಿರದ ಕನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮಿ ಕರ್ನಾಟಕದ ಲಿಂಗಾಯತ ಮಠಾಧೀಶರ ಒಕ್ಕೂಟದ ಪೂಜ್ಯರ ಕುರಿತು ತೀರ ಅವಮಾನಕಾರಿ, ಮಾನಹಾನಿಕರ ಮತ್ತು ಧರ್ಮದ ಹೆಸರಿನಲ್ಲಿ ವಿಭಜನೆ ಮೂಡಿಸಬಹುದಾದ ಶಬ್ದಗಳನ್ನು ಬಳಸಿದ್ದಾರೆ. ಲಿಂಗಾಯತ ಮಠಾಧೀಶರ ಒಕ್ಕೂಟವನ್ನು ಮುಖ್ಯಮಂತ್ರಿಗಳ ಕೃಪಾಪೋಷಿತ ಕಲಾವಿದರೆಂದು ಹೇಳಿಕೆ ನೀಡಿದ್ದಾರೆ. ಮುಂದುವರೆದು, ಬಸವ ಸಂಸ್ಕೃತಿ ಅಭಿಯಾನದ ಬಗ್ಗೆ, ಹಾಗೂ ಲಿಂಗಾಯತ ಮಠಾಧಿಪತಿಗಳಿಗೆ ಅಶ್ಲೀಲ, ಅವಾಚ್ಯ. ಅಸಂವಿಧಾನಿಕ ಭಾಷೆಯನ್ನು ಬಳಸಿ ಅವರಿಗೆ ಅಪಮಾನ ಮಾಡಿದ್ದಾರೆ. ಒಬ್ಬ ಮಠಾಧಿಪತಿಯಾಗಿ ಅವರ ಬಾಯಿಂದ ಈ ತರದ ಅಶ್ಲೀಲ, ಅವಾಚ್ಯ. ಅಸಂವಿಧಾನಿಕ ಶಬ್ದಗಳು ಬರಬಾರದು. ಬಸವ ಸಂಸ್ಕೃತಿ ಅಭಿಯಾನದ ಯಶಸ್ಸನ್ನು ಕಂಡು ಹೊಟ್ಟೆ ಉರಿಯಿಂದ ಯಾರನ್ನೋ ಮೆಚ್ಚಿಸಲು ಈ ಸ್ವಾಮಿ ಈ ರೀತಿ ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಅವರು ಕ್ಷಮೆ ಕೇಳದಿದ್ದರೆ ಉಗ್ರ ಹೋರಾಟ ಮಾಡಲಾಗುವುದು.
ಈ ಕನ್ಹೇರಿ ಸ್ವಾಮಿ ಲಿಂಗಾಯತ ಮಠಾಧೀಶರನ್ನು ‘ಸೂಳೆ ಮಕ್ಕಳು’ ಎಂದು ನಿಂದಿಸುವುದರೊಂದಿಗೆ ಇಂತಹವರನ್ನು ಚಪ್ಪಲಿಯಿಂದ ಹೊಡೆಯುತ್ತೇನೆ" ಎಂದು ಅತ್ಯಂತ ಅವಮಾನಕರ ಶಬ್ದ ಬಳಸುವುದರೊಂದಿಗೆ ಪ್ರತಿಷ್ಠಿತ ಒಕ್ಕೂಟದ ಮಠಾಧೀಶರನ್ನು ಹೆದರಿಸುವ ಮತ್ತು ಹಿಂಸಾತ್ಮಕ ಹಲ್ಲೆ ಮಾಡುವ ಉದ್ದೇಶದಿಂದ ಕೀಳು ಮಟ್ಟದ ಭಾಷೆಯನ್ನು ಬಳಸಿ ಸಮಸ್ತ ಲಿಂಗಾಯತ ವಿರಕ್ತ ಮಠಗಳ ಪೀಠಾಧಿಪತಿಗಳನ್ನು ಅವಮಾನಿಸಿದ್ದಾರೆ. ಇಂತಹ ಹೇಳಿಕೆಗಳು ಧಾರ್ಮಿಕ ಸಹಿಷ್ಣುತೆಗೆ ಧಕ್ಕೆ ತರುವುದಲ್ಲದೆ, ಸಮಾಜದಲ್ಲಿ ಉದ್ರೇಕ ಮತ್ತು ದ್ವೇಷವನ್ನು ಹರಡಲು ಕಾರಣವಾಗುತ್ತದೆ. ಇದು ಲಿಂಗಾಯತ ಧರ್ಮದ ಸೀಠಾಧಿಪತಿಗಳ ಅವಹೇಳ ವಾಗಿರುವುದರಿಂದ ಲಿಂಗಾಯತ ದರ್ಮಿಯರು ರೊಚ್ಚಿಗೇಳುವ ಸಂಭವ ಇರುತ್ತದೆ. ಇದು ಭಾರತೀಯ ದಂಡ ಸಂಹಿತೆಯ (ಬಿ.ಎನ್.ಎಸ್.) ಕೆಳಗಿನ ವಿಧಿಗಳನ್ನು ಉಲ್ಲಂಘಿಸುತ್ತದೆ. ಕಲಂ, 196 ಸಮುದಾಯಗಳ ಮಧ್ಯೆ ಶತ್ರುತ್ರ ಹುಟ್ಟಿಸುವುದು, ಕಲಂ: 299 ಧಾರ್ಮಿಕ ಭಾವನೆಗಳಿಗೆ ಅಪಮಾನ ಮಾಡುವ ಉದ್ದೇಶದಿಂದ ಮಾಡಿದ ಕಲಂ : 356 ಸುಮಾರು ನಾಲ್ಕು ನೂರು ಮಠಾಧೀಶರ ಮಾನಹಾನಿ ಕಲಂ ; 352 ಉದ್ದೇಶಪೂರ್ವಕವಾಗಿ ಶಾಂತಿ ಭಂಗ ಮಾಡುವ ಉದ್ದೇಶದಿಂದ ಮಾಡಿದ ಅವಮಾನದ ಹೇಳಿಕೆಯಾಗಿದೆ. ಸೂಕ್ತ ತನಿಖೆ ನಡೆಸಿ, ಕನೇರಿ ಮಠದ ಸ್ವಾಮೀಜಿಯವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ. ಅದಲ್ಲದೆ ಸದರಿ ಸ್ವಾಮಿ ನಾಳೆ ದಿನಾಂಕ 15-16 ರಂದು ಬಸವನ ಬಾಗೇವಾಡಿಗೆ ಭೇಟಿ ನೀಡುತ್ತಿದ್ದು, ಅಲ್ಲಿ ಆತ ಬಸವಭಕ್ತರ ಆಕ್ರೋಶಕ್ಕೆ ಗುರಿಯಾಗುವ ಸಾಧ್ಯತೆಗಳಿವೆ. ಸದರಿ ಸ್ವಾಮಿ ಮಾತಾಡಿದ ವಿಡಿಯೋ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕಾರಣ ಆತನಿಗೆ ವಿಜಯಪುರ ಜಿಲ್ಲಾ ಪ್ರವೇಶವನ್ನು ನಿಷೇಧಿಸಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಜಾಗತಿಕ ಲಿಂಗಾಯತ ಮಹಾಸಭೆಯ ಪದಾಧಿಕಾರಿಗಳು ಹಾಗೂ ಬಸವಾಭಿಮಾನಿಗಳಾದ ಜೆ.ಎಸ್.ಪಾಟೀಲ, ಪ್ರಭುಗೌಡ ಪಾಟೀಲ, ಕಲ್ಬುರ್ಗಿ, ಹೂಗಾರ, ಅಂಗಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 