ವಾಷಿಂಗ್ಟನ್ 13: ಇರಾನ್ ನ ಶಂಕಿತ ಪರಮಾಣು ಕಾರ್ಯಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ನವೆಂಬರ್ 4ರಿಂದ ಇರಾನ್ ನಿಂತ ತೈಲ ಆಮದು ಮಾಡಿಕೊಳ್ಳದಂತೆ ಅಮೆರಿಕಾ ಜಾಗತಿಕ ನಿರ್ಬಂಧ ಹೇರಿದ ಬೆನ್ನಲ್ಲೇ ರಷ್ಯಾದಿಂದ ಎಸ್ -400 ರಕ್ಷಣಾ ವ್ಯವಸ್ಥೆ ಹಾಗೂ ಇರಾನ್ ನಿಂದ ತೈಲ ಆಮದು ಮಾಡಿಕೊಳ್ಳುವ ಭಾರತದ ನಿರ್ಧಾರದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎನ್ನಲಾಗಿದೆ.
ಎಸ್ -400 ರಕ್ಷಣಾ ವ್ಯವಸ್ಥೆ ಹಾಗೂ ಇರಾನ್ ನಿಂದ ತೈಲ ಆಮದು ಮಾಡಿಕೊಳ್ಳುವ ಭಾರತದ ನಿರ್ಧಾರವನ್ನು ಗಂಭೀರವಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಮೆರಿಕಾದ ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಒಂದು ವೇಳೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ದಂಡನಾತ್ಮಕ ಕ್ರಮಗಳನ್ನು ಎದುರಿಸುವಂತೆ ಮಾಡಿದ್ದರೆ ಆನಂತರ ಇದು ಸಹಾಯಕವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇರಾನ್ ನಿಂದ ನವೆಂಬರ್ 4 ರಿಂದ ಆ ದೇಶದಿಂದ ತೈಲವನ್ನು ಆಮದು ಮಾಡಿಕೊಳ್ಳದಂತೆ ಅಮೆರಿಕಾ ಜಾಗತಿಕ ನಿರ್ಬಂಧ ವಿಧಿಸಿದ ಹಿನ್ನಲೆಯಲ್ಲಿ ಭಾರತ ನವೆಂಬರ್ 4 ರಿಂದ ಇರಾನ್ ನಿಂದ ತೈಲ ಆಮದು ಮಾಡಿಕೊಳ್ಳುವ ಭಾರತದ ನಿರ್ಧಾರ ಸಹಾಯಕವಾಗುವುದಿಲ್ಲ ಎಂದು ಅಮೆರಿಕಾ ರಾಜ್ ವಕ್ತಾರ ಹೀಟರ್ ಹೇಳಿದ್ದಾರೆ.
ನವೆಂಬರ್ ತಿಂಗಳಿನಿಂದ ಇರಾನ್ ನಿಂದ ಕಚ್ಚಾ ತೈಲ ಆಮದು ಮಾಡಿಕೊಳ್ಳಲು ಎರಡು ರಿಪೈನರ್ಸ್ ಗಳು ಆರ್ಡರ್ ಮಾಡಿವೆ ಎಂದು ಸೋಮವಾರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದರು.