ಕೊಪ್ಪಳ 20: ಹತ್ತಿರದ ಆಸ್ಪತ್ರೆ, ಪೊಲೀಸ್ ಠಾಣೆ ಮತ್ತು ಕಂಟ್ರೋಲ್ ರೂಂ. ನ ದೂರವಾಣಿ ಸಂಖ್ಯೆಗಳುಳ್ಳ ಉತ್ತಮ ಗುಣಮಟ್ಟದ ಫಲಕಗಳನ್ನು ಪ್ರತಿ 10 ಕಿ.ಮೀ ಗೆ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಕಾರ್ಯಕ್ರಮದ ಎ.ಜಿ.ಆಡಿಟ್ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಅಪಘಾತ ಪ್ರಕರಣಗಳನ್ನು ಹಾಗೂ ಅಪಘಾತದಲ್ಲಿ ಮರಣ ಹೊಂದುವವರ ಪ್ರಮಾಣವನ್ನು ಕಡಿಮೆಗೊಳಿಸಲು ಅಗತ್ಯವಿರುವ ಎಲ್ಲ ರೀತಿಯ ನಿಯಮಾವಳಿಗಳನ್ನು ಜಾರಿಗೆ ತರಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು. ವಾಹನ ಸವಾರರಿಗೆ ನೀಡುವ ಪರವಾನಿಗೆಯಲ್ಲಿ ಸಕರ್ಾರಿ ನಿಯಮಾವಳಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ವಾಹನ ಚಾಲಕರ ಚಾಲನಾ ಪರವಾನಗಿ, ವಿಮಾ ಸಂಬಂಧಿತ ದಾಖಲೆಗಳು, ಹೆಲ್ಮೆಟ್ ಸೇರಿದಂತೆ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಬೇಕು. ಸಾರ್ವಜನಿಕರಲ್ಲಿ ಈ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜಿಲ್ಲೆಯಲ್ಲಿ ಪ್ರತಿ ಹತ್ತು ಕಿ. ಮೀ. ಗೆ ದೂರವಾಣಿ ಸಂಖ್ಯೆಗಳನ್ನೊಳಗೊಂಡ ಫಲಕಗಳ ಜೊತೆಗೆ ಪ್ರತಿ 25 ಕಿ. ಮೀ. ಗೆ ಒಂದರಂತೆ 108 ಅಂಬುಲೆನ್ಸ್ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಖಾಸಗಿ ಶಾಲೆಗಳಲ್ಲಿ ಸಿಸಿ ಟಿವಿಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಮಕ್ಕಳನ್ನು ಕರೆತರುವ ವಾಹನಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಈ ಕುರಿತು ಸಿಸಿ ಟಿವಿಯಲ್ಲಿ ದಾಖಲಾಗಬೇಕು. ಸಕರ್ಾರಿ ಬಸ್ಗಳು ನಿಗದಿತ ನಿಲ್ದಾಣದಲ್ಲಿ ನಿಧರ್ಿಷ್ಟ ಬಸ್ ಬೇ ನಲ್ಲಿ ಬಸ್ ನಿಲ್ಲಿಸಬೇಕು. ಕೆಲವೆಡೆ ಸಕರ್ಾರಿ ಬಸ್ಗಳು ನಿಲ್ಲುವ ಸ್ಥಳದಲ್ಲಿ ಖಾಸಗಿ ವಾಹನಗಳು ನಿಲ್ಲುವುದು ಕಂಡುಬಂದಿದೆ. ಅದನ್ನು ನಿಯಂತ್ರಿಸಿಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕೆಎಸ್ಆರ್ಟಿಸಿ ಅಧಿಕಾರಿ ಕ್ರಮ ಕೈಗೊಳ್ಳಬೇಕು. ರಸ್ತೆ ಸುರಕ್ಷತೆ ಕುರಿತು ಸಂಬಂಧಿಸಿದ ಅಧಿಕಾರಿಗಳ ವಾಟ್ಸ್ಆಯಪ್ ಗ್ರೂಪ್ ರಚಿಸಬೇಕು. ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ರಸ್ತೆ ಸುರಕ್ಷತಾ ಕುರಿತು ನೋಡಲ್ ಏಜೆನ್ಸಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ ಮಾತನಾಡಿ ಸಾಮಾನ್ಯವಾಗಿ ಅಪಘಾತ ಸಂಭವಿಸಿದಾಗ ಅಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ಅಪಘಾತ ಸಂತ್ರಸ್ತರನ್ನು ನಿರ್ವಹಿಸುವ ಕುರಿತು ಸೂಕ್ತ ತಿಳುವಳಿಕೆ ಇರುವುದಿಲ್ಲ. ಆದ್ದರಿಂದ 108 ಅಂಬ್ಯುಲೆನ್ಸ್ನಲ್ಲಿ ಅಗತ್ಯ ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಹಾಗೂ ಅಪಘಾತ ಸಂತ್ರಸ್ತರನ್ನು ಆಸ್ಪತ್ರೆಗೆ ಸಾಗಿಸುವಾಗ ಆಸ್ಪತ್ರೆ ಸಿಬ್ಬಂದಿಗೆ ಆ ಕುರಿತು ಮಾಹಿತಿ ನೀಡಿ ಚಿಕಿತ್ಸೆಗೆ ಸನ್ನದ್ದರಾಗಿರುವಂತೆ ಸೂಚಿಸಬೇಕು. ಈ ಕುರಿತಂತೆ ಜಿಲ್ಲಾ ಆರೋಗ್ಯಾಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಈಗಾಗಲೇ ಎರಡು ಇಂಟರ್ಸೆಪ್ಟರ್ ವಾಹನಗಳಿದ್ದು, ಇನ್ನೂ ಎರಡು ವಾಹನಗಳ ಅಗತ್ಯವಿದೆ. ಪೆಟ್ರೋಲಿಂಗ್ ವಾಹನಗಳು ಹಾಗೂ ಅಂಬುಲೆನ್ಸ್ಗಳಲ್ಲಿ ಪ್ರಥಮ ಚಿಕಿತ್ಸೆಗೆ ಅಗತ್ಯವಾಗಿ ಬೇಕಾದ ಎಲ್ಲ ವೈದ್ಯಕೀಯ ಸಲಕರಣೆಗಳನ್ನು ಒಳಗೊಂಡಿರಬೇಕು ಎಂದು ಅವರು ಸಲಹೆ ನೀಡಿದರು.
ಸಭೆಯಲ್ಲಿ ಭಾಗವಹಿಸಿದ್ದ ಎ.ಜಿ. ಆಡಿಟ್ ಕಚೇರಿಯ ವಿಶೇಷಾಧಿಕಾರಿ ಹರೀಶ ಮಾತನಾಡಿ, ಶಾಲಾ ಕಾಲೇಜು ವಿದ್ಯಾರ್ಥಿಗಳು ಚಾಲನಾ ಪರವಾನಿಗೆ ಇಲ್ಲದೆ ವಾಹನ ಚಲಾಯಿಸುವುದು ಸಾಮಾನ್ಯವಾಗಿದೆ. ಆದರೆ ಇದು ಕಾನೂನು ರೀತ್ಯ ಅಪರಾಧವಾಗಿದ್ದು, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಈ ಕುರಿತು ತಿಳುವಳಿಕೆ ಮೂಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಭಾಗಗಳಲ್ಲಿ ರಸ್ತೆ ಬದಿಗಳಲ್ಲಿ ತಿಪ್ಪೆಗುಂಡಿಗಳನ್ನು, ಕಸದ ರಾಶಿಯನ್ನು ಹಾಕುವುದರಿಂದ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿ ಅಪಘಾತಗಳಾಗುವ ಸಂಭವವಿರುತ್ತದೆ. ಇನ್ನು ನಗರ ಪ್ರದೇಶಗಳಲ್ಲಿ ಪಾದಚಾರಿ ರಸ್ತೆಗಳಲ್ಲಿ ಗೂಡಂಗಡಿ ಮಾಲೀಕರು ಅತಿಕ್ರಮಣ ಮಾಡುವುದರಿಂದ ಪಾದಚಾರಿಗಳ ಸಂಚಾರಕ್ಕೆ ಅಡ್ಡಿಯುಂಟಾಗುತ್ತದೆ. ಆದ್ದರಿಂದ ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳು ಈ ಕುರಿತು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿ ಅನುಷ್ಠಾನಗೊಳಿಸಬೇಕು. ಇದರಿಂದ ಅಪಘಾತಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆಯನ್ನು ಕಾಣಬಹುದು ಎಂದು ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಎನ್. ಶೇಖರ್, ಕೆಎಸ್ಆರ್ಟಿಸಿ ಅಧಿಕಾರಿ ಎಂ.ಎನ್. ಮುಲ್ಲಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.