ಸ್ವಾತಂತ್ರ್ಯ ಹೋರಾಟದ ಆಶಯ ಈಡೇರಿಲ್ಲ: ಬಸವರಾಜ ಪೂಜಾರ
The aspirations of the freedom struggle have not been fulfilled: Basavaraja Pujara
ಹಾವೇರಿ, ಆ.16: ದೇಶಕ್ಕೆ ಸ್ವಾತಂತ್ರ್ಯ ದೊರೆತು 80 ವರ್ಷ ಕಳೆದರೂ ಸ್ವಾತಂತ್ರ್ಯ ಹೋರಾಟಗಾರರ ಆಶಯಗಳು ಈಡೇರಿಲ್ಲ. ಶಿಕ್ಷಣ, ಉದ್ಯೋಗ, ವಸತಿ, ಆಹಾರ ಹಾಗೂ ಘನತೆಯ ಬದುಕು ಸೇರಿದಂತೆ ಮೂಲಭೂತ ಹಕ್ಕುಗಳಿಗಾಗಿ ಹೋರಾಟ ಮುಂದುವರಿದಿದೆ ಎಂದು ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದರು.
ನಗರದ ಶಿವಾಜಿನಗರದಲ್ಲಿರುವ ಎಸ್‌ಎಫ್‌ಐ-ಡಿವೈಎಫ್‌ಐ ಕಚೇರಿ ಎದುರು ಎಸ್‌ಎಫ್‌ಐ ಹಾಗೂ ಡಿವೈಎಫ್‌ಐ ಹಾವೇರಿ ಜಿಲ್ಲಾ ಸಮಿತಿಗಳಿಂದ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದ ಗಾಂಧೀಜಿ, ಭಗತ್ಸಿಂಗ್, ಸಂಗೊಳ್ಳಿ ರಾಯಣ್ಣ ಸೇರಿದಂತೆ ಅನೇಕ ಹೋರಾಟಗಾರರ ಆದರ್ಶಗಳನ್ನು ಗೌರವಿಸಿ, ಅವರ ಹೋರಾಟದ ಪರಂಪರೆಯನ್ನು ಶಿಕ್ಷಣ ಮತ್ತು ಉದ್ಯೋಗದ ಮೂಲಭೂತ ಹಕ್ಕುಗಳಿಗಾಗಿ ಹಾಗೂ ದೇಶದ ಅಭಿವೃದ್ಧಿಗಾಗಿ ಮುಂದುವರಿಸುವುದು ಎಲ್ಲರ ಕರ್ತವ್ಯ ಎಂದರು.
ಎಸ್‌ಎಫ್‌ಐ ಜಿಲ್ಲಾ ಅಧ್ಯಕ್ಷ ಬಸವರಾಜ ಎಸ್. ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ವಿದ್ಯಾರ್ಥಿ-ಯುವಜನರು ಅಧ್ಯಯನ ಮಾಡಿ, ಅವರ ಆಶಯಗಳನ್ನು ಸಾಕಾರಗೊಳಿಸಲು ಮುಂದಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಡಿವೈಎಫ್‌ಐ ರಾಜ್ಯ ಸಮಿತಿ ಸದಸ್ಯೆ ರೇಣುಕಾ ಕಹಾರ, ತಾಲೂಕು ಅಧ್ಯಕ್ಷ ದ್ಯಾಮಣ್ಣ ಆರೇರ್, ಜಿಲ್ಲಾ ಮುಖಂಡರಾದ ಅರುಣ್ ಕುಮಾರ್ ನಾಗವತ್, ವಿಠ್ಠಲ ಗೌಳಿ, ಲೋಕೇಶ್ ಪರಶುರಾಮ, ಲಕ್ಷ್ಮಣ ಭಜಂತ್ರಿ, ಗೀರೀಶ್ ಲಮಾಣಿ, ಗಣೇಶ್ ವಡ್ಡರ, ನಿಂಗಾರಾಜ ಪೂಜಾರ, ಹನುಮಂತಗೌಡ ಭರಮಗೌಡ್ರು ಸೇರಿದಂತೆ ಹಲವರು ಭಾಗವಹಿಸಿದ್ದರು. ಬಾಲ ಸಂಘಂ ಸಂಗಾತಿ ಅನ್ವಿಕಾ ಆರಿ್ಬ. ಭಾಷಣ ಮಾಡಿದರು. ಕಾಲೇಜು ಘಟಕದ ಅಧ್ಯಕ್ಷೆ ಕಾಮ್ರೇಡ್ ಚೈತ್ರಾ ಕೊರವರ ಕಾರ್ಯಕ್ರಮ ನಿರೂಪಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 