ಎನ್ಎಸ್ಎಸ್ ವ್ಯಕ್ತಿತ್ವ ವಿಕಸನದ ಮೂಲ ಉದ್ದೇಶ: ಡಾ. ಸೂರ್ಯವಂಶಿ

ಲೋಕದರ್ಶನ ವರದಿ

ಮುಧೋಳ: ವಿದ್ಯಾಥರ್ಿ ಮತ್ತು ಸಮಾಜದ ನಡುವಿನ ರಚನಾತ್ಮಕವಾದ ಸಂಬಂಧ ಬೆಳೆಯಬೇಕೆಂಬ ಉದ್ದೇಶದಿಂದ ಭಾರತದಾತ್ಯಂತ ರಾಷ್ಟ್ರೀಯ ಸೇವಾ ಯೋಜನಾ ದಿನವನ್ನು ಸ.24ರಂದು ಆಚರಿಸಲಾಗುತ್ತದೆ ಎಂದು ಎನ್ಎಸ್ಎಸ್ ನೋಡಲ್ ಅಧಿಕಾರಿ ಡಾ.ಎ.ವ್ಹಿ.ಸೂರ್ಯವಂಶಿ ಹೇಳಿದರು. 

 ಬಾಗಲಕೋಟ ಬಿವ್ಹಿವ್ಹಿ ಸಂಘದ ಮುಧೋಳದ ಎಸ್.ಆರ್.ಕಂಠಿ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕ 1 ಮತ್ತು 2ರ ಅಡಿಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಎನ್ಎಸ್ಎಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಸ್ಥಾನವಹಿಸಿ ಮಾತನಾಡಿ ಸ್ವಾತಂತ್ರ್ಯ ನಂತರದ ದಿನಗಳಲ್ಲಿ ವಿದ್ಯಾಥರ್ಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆಯನ್ನು ಮೂಡಿಸಲು ಮತ್ತು ಪರಿಪೂರ್ಣ ವ್ಯಕ್ತಿತ್ವ ವಿಕಸನದ ಮೂಲ ಉದ್ದೇಶದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಾರಂಭಿಸಬಹುದೆಂದು ಡಾ.ರಾಧಾಕೃಷ್ಣನ್ ನೇತೃತ್ವದ ವಿಶ್ವವಿದ್ಯಾನಿಲಯ ಅನುಧಾನ ಸಮಿತಿ ವಿಶ್ವವಿದ್ಯಾನಿಲಯ ಭಾರತ ಸಕರ್ಾರಕ್ಕೆ ಅನುಮೋದನೆ ನೀಡಿತು,ಕಲಿಕೆ ಎನ್ನುವುದು ಕೇವಲ ವಿದ್ಯಾಥರ್ಿ ಮತ್ತು ಶಿಕ್ಷಕರ ನಡುವಿನ ಕೊಂಡಿಯಾಗಿರದೆ ವಿದ್ಯಾಥರ್ಿ ಮತ್ತು ಸಮುದಾಯದ ನಡುವೆ ಸುಖಕರವಾದ ಮತ್ತು ರಚನಾತ್ಮಕವಾದ ಸಂಬಂಧ ಬೆಳೆಯಬೇಕು ಎಂಬ ಆಶಯದೊಂದಿಗೆ ಸ್ವಯಂ ಪ್ರೇರಿತರಾಗಿ ಸಮುದಾಯ ಸೇವಾಭಾವನೆ ಮೂಡಿಸಲು ರಾಷ್ಟ್ರೀಯ ಸೇವಾ ಯೋಜನೆಯನ್ನು ಜಾರಿಗೆ ತರಲಾಯಿತು.

  ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಕನಸಿನ ಕಲ್ಪನೆಯಾದ ರಾಮರಾಜ್ಯದ ಆಶಯದೊಂದಿಗೆ ಗಾಂಜಿಯವರ ಜನ್ಮದಿನದ 100ನೇ ವರ್ಷದಲ್ಲಿ ಅಂದರೆ 1969ರಲ್ಲಿ ಆರಂಭಿಸಲಾಯಿತು, ಗಾಂಧೀಜಿಯವರು ಸಮಾಜ ಸೇವೆಯನ್ನೇ ಕಾಯಕವಾಗಿ ಮಾಡಿಕೊಂಡು ಅದನ್ನು ಧರ್ಮದಂತೆ ಆಚರಿಸುತ್ತಿದ್ದರು, ಇದರಿಂದಾಗಿಯೇ ಅವರ ಪುಣ್ಯಸ್ಮರಣೆಗಾಗಿ ಗೌರವಾರ್ಥವಾಗಿ ಎನ್.ಎಸ್.ಎಸ್ ನ್ನು ಜನ್ಮ ಶತಮಾನೋತ್ಸವದ ವರ್ಷವಾದ 1969 ಸೆ.24ರಂದು ದೇಶಾದ್ಯಂತ ವಿವಿಧ ರಾಜ್ಯಗಳ 37 ವಿಶ್ವವಿದ್ಯಾನಿಲಯಗಳಲ್ಲಿ ಪ್ರಾರಂಭಿಸಲಾಯಿತು,

       ಈ ಕಾರಣಕ್ಕಾಗಿಯೇ ಸೆ.24ರಂದು ಎನ್.ಎಸ್.ಎಸ್ ದಿನ ಎಂದು ದೇಶಾದ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ ಎಂದರು.

  ಪ್ರಾಚಾರ್ಯ ಡಾ.ಎನ್.ಬಿ.ಇಂಗನಾಳ ಅವರು ಅಧ್ಯಕ್ಷತೆವಹಿಸಿ ಮಾತನಾಡಿ ನಾಯಕತ್ವ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವುದು,  ಸಾಕ್ಷರತೆ ಮೂಲಕ ಅಕ್ಷರ ಕ್ರಾಂತಿಗೆ ನೆರವಾಗುವುದು, ತಾವು ವಾಸಮಾಡುವ ಸಮುದಾಯ, ಸಮಾಜಗಳ ಸಮಸ್ಯೆ ಮತ್ತು ಆಗತ್ಯಗಳನ್ನು ಅರಿಯುವುದು, ಮತ್ತು ಪರಿಹಾರಕ್ಕೆ ಯತ್ನಿಸುವುದು,ವ್ಯಕ್ತಿಯಾಗಿ ಈ ಸಮಾಜಕ್ಕೆ ಏನು ಮಾಡಬಲ್ಲೆ ಎಂಬ ಚಿಂತನೆ ಮಾಡುವುದು,ಗ್ರಾಮ ಮತ್ತು ಗುಡಿ  ಕೈಗಾರಿಕೆಗಳ ಪ್ರಗತಿಗೆ ನೆರವಾಗುವುದು,ಗ್ರಾಮಗಳ ಆರೋಗ್ಯ ನೈರ್ಮಲ್ಯಗಳನ್ನು ಕುರಿತು ಚಿಂತನೆ,ವಿಮಶರ್ೆ ಮಾಡುವುದು.

      ಪರಿಸರದ ಬಗ್ಗೆ ಕಾಳಜಿ ಹುಟ್ಟಿಸುವುದು ಮತ್ತು ಪರಿಸರ ಸಂರಕ್ಷಣೆಯಲ್ಲಿ ನೆರವಾಗುವುದು,ಹಿಂದುಳಿದ ಮತ್ತು ದುರ್ಬಲ ವರ್ಗದವರ ಜನರ ಬದುಕಿನ ಕಷ್ಟಸುಖಗಳಿಗೆ ಸ್ಪಂದಿಸುವುದು, ಕೋಮುವಾದವನ್ನು ತೊಲಗಿಸಿ ರಾಷ್ಟ್ರೀಯ ಭಾವೈಕ್ಯತೆಯನ್ನು ಬೆಳೆಸುವುದು, ಮೇಲು, ಕೀಳು ಭಾವನೆಯನ್ನು ತೊಲಗಿಸಿ ವರ್ಗ ಮತ್ತು ವರ್ಣರಹಿತ ಸಮಾಜವನ್ನು ನಿಮರ್ಿಸಲು ಶ್ರಮಿಸುವುದು, ಮೈತ್ರಿ, ಸಹೋದರತ್ವ, ಸಹಬಾಳ್ವೆ, ಸೌಹಾರ್ದತೆ, ಸಹಕಾರ, ಸಹಜೀವನ ಮತ್ತು ಶಿಸ್ತುಬದ್ಧ ಜೀವನವನ್ನು ಮೈಗೂಡಿಸಿಕೊಳ್ಳುವುದು,ವೈಯಕ್ತಿಕ ಬೆಳವಣಿಗೆ ಮತ್ತು ರಾಷ್ಟ್ರದ ಬೆಳವಣಿಗೆಗೆ ಪೂರಕವಾದ ವಾತಾವರಣ ಕಲ್ಪಿಸುವುದು, ಪ್ರತಿಫಲಾಕ್ಷೆ ಇಲ್ಲದೆ ಮಾಡುವ ಸೇವೆ ಅತ್ಯಂತ ಪವಿತ್ರವಾದದು ಮುಂತಾದವುಗಳು ಎನ್ಎಸ್ಎಸ್ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದರು.

 ಎನ್ಎಸ್ಎಸ್ ಘಟಕ 1ರ ಕಾರ್ಯಕ್ರಮಾಧಿಕಾರಿ ಪ್ರೊಯವ್ಹಿ.ಎಂ.ಕಿತ್ತೂರ ಸ್ವಾಗತಿಸಿದರುಎನ್ಎಸ್ಎಸ್ ಘಟಕ 2ರ ಕಾರ್ಯಕ್ರಮಾಧಿಕಾರಿ ವಂದಿಸಿದರು, ಪ್ರೊ.ಪಿ.ಡಿ.ಕುಂಬಾರ ನಿರೂಪಿಸಿದರು, ವಿದ್ಯಾಥರ್ಿನಿ ಗಗನಶ್ರೀ ಘಂಟಿ ಪ್ರಾರ್ಥನೆ ಹೇಳಿದರು, ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾಥರ್ಿಗಳು ಉಪಸ್ಥಿತರಿದ್ದರು.