ಸಾಲಮನ್ನಾದ ಲಾಭ ಇಡೀ ರಾಜ್ಯಕ್ಕೆ: ರೆಡ್ಡಿ

ಬೆಳಗಾವಿ 07: ಮೊನ್ನೆತಾನೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಮಂಡಿಸಿರುವ ಬಜೆಟ್ನಲ್ಲಿ ಉತ್ತರ ಕನರ್ಾಟಕಕ್ಕೆ ಅನ್ಯಾಯವಾಗಿದ್ದರೆ ಮುಂಬರುವ ದಿನಗಳಲ್ಲಿ ಆ ಅನ್ಯಾಯವನ್ನು ಸರಿಪಡಿಸುವ ಕೆಲಸ ಸಮ್ಮಿಶ್ರ ಸಕರ್ಾರ ಮಾಡಲಿದೆ ಎಂದು ಕೃಷಿ ಸಚಿವ ಶಿವಶಂಕರ ರೆಡ್ಡಿ ಇಂದಿಲ್ಲಿ ಸ್ಟಷ್ಟನೆ ನೀಡಿದ್ದಾರೆ.

ಶನಿವಾರ ದಿನದಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರ ಸಾಲ ಮನ್ನಾ ಹಳೇ ಮೈಸೂರು ಭಾಗಕ್ಕೆ ಮಾತ್ರ ಸೀಮಿತವಲ್ಲ. ಇಡೀ ರಾಜ್ಯದ ರೈತರು ಇದರ ಸದುಪಯೋಗ ಪಡೆಯಲಿದ್ದಾರೆ. ಜೊತೆಗೆ ಇದೇನು ನಮ್ಮ ಸಕರ್ಾರದ ಅಂತಿಮ ಬಜೆಟ್ ಅಲ್ಲ. ಇನ್ನೂ ಸಪ್ಲಿಮೆಂಟರಿ ಬಜೆಟಗಳು ಬರಲಿವೆ ಆಗ ಉ.ಕನರ್ಾಟಕದ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಸಕರ್ಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು. 

ಉತ್ತರ ಕನರ್ಾಟಕ ಭಾಗಕ್ಕೆ ಅನ್ಯಾಯವಾಗಿದೆ ಎಂದು ಮಾಜಿ ಸಚಿವ ಹೆಚ್.ಕೆ.ಪಾಟೀಲ ಸೇರಿದಂತೆ ಹಲವು ನಾಯಕರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಯಾವ ಕಾರಣಕ್ಕೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ನಮಗೆ ಗೊತ್ತಿಲ್ಲ. ದೊಡ್ಡವರ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು 

ನುಡಿದರು. 

ಪ್ರತ್ಯೇಕ ರಾಜ್ಯದ ಬಗ್ಗೆ ಇದೇ ವೇಳೆಯಲ್ಲಿ ಮಾತನಾಡಿದ ಸಚಿವರು, ಇತ್ತೀಚಿನ ದಿನಗಳಲ್ಲಿ ಮತ್ತೆ ಉತ್ತರ ಕನರ್ಾಟಕ ಪ್ರತ್ಯೇಕಿಸುವ ಕೂಗು ಕೇಳಿ ಬರುತ್ತಿದೆ. ಆದರೆ ಯಾವುದೇ ಕಾರಣಕ್ಕೂ ರಾಜ್ಯ ಇಬ್ಬಾಗ ಆಗಲು ಬಿಡುವುದಿಲ್ಲ. ಯಾರೋ ಒಬ್ಬರೂ ಈ ರೀತಿ ಹೇಳಿದರೆ ಅದಕ್ಕೆ ತಲೆ ಕೆಡಿಸಿಕೊಳ್ಳುವ ಅಗತ್ಯತೆ ಇಲ್ಲ ಎಂದು ಕೃಷಿ ಸಚಿವ ಶಿವಶಂಕರ ರೆಡ್ಡಿ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.