ಬೆಂಗಳೂರಿಗೆ ಆಗಮಿಸಿದ ಶ್ರೀಗಳ ಪಾರ್ಥಿವ ಶರೀರ

  ಬೆಂಗಳೂರು, ಡಿ 29      ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳ ಪಾರ್ಥಿವ ಶರೀರವನ್ನು ವಿಶೇಷ ಸೇನಾ ಹೆಲಿಕಾಪ್ಟರ್ ಮೂಲಕ ಎಚ್ ಎಎಲ್ ವಿಮಾನ ನಿಲ್ದಾಣ ಕರೆತರಲಾಗಿದೆ.     ಹೆಲಿಕಾಪ್ಟರ್ ನಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ರಘುಪತಿ ಭಟ್ ಮತ್ತು ವಾಯು ಸೇನಾ ಸಿಬ್ಬಂದಿ ಉಪಸ್ಥಿತರಿದ್ದರು. ಶ್ರೀಗಳ ಪಾರ್ಥಿವ ಶರೀರವನ್ನು ಕೇಸರಿ ಪೆಟ್ಟಿಗೆಯಲ್ಲಿ ತರಲಾಗಿದೆ.     ಪಾರ್ಥಿವ ಶರೀರವನ್ನು ರಸ್ತೆ ಮೂಲಕ ನ್ಯಾಷನಲ್ ಕಾಲೇಜಿನ ಮೈದಾನಕ್ಕೆ ಕರೆದೊಯ್ದು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು.