ಮಂಡ್ಯ 24: ಖಾಸಗಿ ಬಸ್ ನಾಲೆಗೆ ಉರುಳಿ 15 ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿಯ ವಿಸಿ ನಾಲೆಯಲ್ಲಿ ನಡೆದಿದೆ.
ಚಾಲಕನ ನಿರ್ಲಕ್ಷ್ಯದಿಂದಾಗಿ ಬಸ್ ನಾಲೆಗೆ ಉರುಳಿದೆ ಎನ್ನಲಾಗಿದೆ. ಭೀಕರ ಅಪಘಾತದಲ್ಲಿ ಇನ್ನು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಶವಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಾಲೆಗೆ ಯಾವುದೇ ತಡೆಗೋಡೆ ಇರಲಿಲ್ಲ ಎನ್ನಲಾಗಿದೆ. ಈ ಮಾರ್ಗದಲ್ಲಿ ಯಾವುದೇ ಸಕರ್ಾರಿ ಬಸ್ಗಳ ಸೌಲಭ್ಯವಿಲ್ಲ. ಖಾಸಗಿ ಬಸ್ಗಳು ಮಾತ್ರ ಸಂಚರಿಸುತ್ತವೆ.
ಪಾಂಡವಪುರದಿಂದ ಶಿವಳ್ಳಿ ಮಾರ್ಗವಾಗಿ ಮಂಡ್ಯಕ್ಕೆ ತೆರಳುತ್ತಿತ್ತು. ಬಸ್ನಲ್ಲಿ ಹೆಚ್ಚಾಗಿ ಶಾಲಾ ಮಕ್ಕಳು ಇದ್ದರು ಎನ್ನಲಾಗಿದೆ. ಮೃತರೆಲ್ಲರೂ ಅಕ್ಕಪಕ್ಕದ ಊರಿನವರೇ ಎನ್ನಲಾಗಿದೆ. ಸ್ಥಳದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಾಲೆಯಲ್ಲಿ ಬಿದ್ದಿರುವ ಮೃತದೇಹಗಳನ್ನು ಸ್ಥಳೀಯ ಯುವಕರು ಹೊರತೆಗೆಯುತ್ತಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ರಕ್ಷಣಾ ಕಾಯರ್ಾಚರಣೆಗೆ ಸಿಎಂ ಸೂಚನೆ
ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕು ಕನಗನಮರಡಿ ಬಳಿ ವಿ.ಸಿ. ನಾಲೆಗೆ ಬಸ್ ಬಿದ್ದು 15 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಕುರಿತು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ದಿಗ್ಭ್ರಮೆ ವ್ಯಕ್ತ ಪಡಿಸಿದ್ದಾರೆ.
ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಸ್ಥಳಕ್ಕೆ ಕೂಡಲೇ ಭೇಟಿ ನೀಡಿ ರಕ್ಷಣಾ ಕಾಯರ್ಾಚರಣೆ ನಡೆಸುವ ಬಗ್ಗೆ ಸೂಚನೆಗಳನ್ನು ನೀಡಿದ್ದಾರೆ.
ಕಾಂಗ್ರೆಸ್ನಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ
ಬೆಂಗಳೂರು, ನ.24- ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಮತ್ತೆ ಭುಗಿಲೆದ್ದಿದೆ.ಪಕ್ಷದಲ್ಲಿ ಹಿರಿಯರನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದೆ.ಸಂಪುಟ ವಿಸ್ತರಣೆ ಸಂದರ್ಭದಲ್ಲೂ ಆದ್ಯತೆ ನೀಡದೆ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಹಲವು ಹಿರಿಯ ಕಾಂಗ್ರೆಸ್ ಮುಖಂಡರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿಯೇ ಹೊರಹಾಕಿದ್ದಾರೆ.
ಕಾಂಗ್ರೆಸ್ನ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರೋಷನ್ ಬೇಗ್, ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ್ ಸೇರಿದಂತೆ ಅನೇಕರು ತಮ್ಮನ್ನು ಕಡೆಗಣಿಸುತ್ತಿರುವ ಸಂಬಂಧ ಪ್ರತ್ಯೇಕ ಸಭೆ ನಡೆಸಲು ತೀಮರ್ಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಸಮ್ಮಿಶ್ರ ಸಕರ್ಾರ ರಚನೆಯಾಗಿ ಆರು ತಿಂಗಳಾದರೂ ಸಂಪುಟ ವಿಸ್ತರಣೆಯಾಗಿಲ್ಲ. ನಿಗಮ-ಮಂಡಳಿಗಳಿಗೆ ನೇಮಕ ಮಾಡಿಲ್ಲ. ಹಲವು ನೆಪಗಳನ್ನು ಹೇಳಿಕೊಂಡು ವಿನಾಕಾರಣ ಮುಂದೂಡಲಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಕರ್ಾರ ಅಧಿಕಾರಕ್ಕೆ ಬಂದಾ ಗಿನಿಂದಲೂ ಆರೇಳು ಬಾರಿ ಗೆದ್ದಿರುವ ನಮ್ಮಂತ ಹವರು, ಪಕ್ಷಕ್ಕಾಗಿ ಸಾಕಷ್ಟು ಸೇವೆ ಮಾಡಿರುವವರು, ಪಕ್ಷದ ಗೆಲುವಿಗೆ ಶ್ರಮಿಸಿರುವವರನ್ನು ಸಂಪೂರ್ಣ ವಾಗಿ ಕಡೆಗಣಿಸಲಾಗಿದೆ. ಪ್ರಥಮ ಸಂಪುಟ ರಚನೆ ಸಂದರ್ಭದಲ್ಲೇ ಹಿರಿಯರಿಗೆ ಆದ್ಯತೆ ನೀಡಿಲ್ಲ. ವಿಸ್ತರಣೆ ಸಂದರ್ಭದಲ್ಲಾದರೂ ಆದ್ಯತೆ ನೀಡಬೇಕು. ಇಲ್ಲದಿದ್ದರೆ ಲೋಕಸಭೆ ಚುನಾವಣೆಯಲ್ಲಿ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂಬ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳನ್ನು ಭತರ್ಿ ಮಾಡಬೇಕಿತ್ತು.ನಾನೇನು ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ಒತ್ತಾಯ ಮಾಡಿಲ್ಲ. ಆದರೆ, ಹಿರಿಯರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕಿತ್ತು.
ಸಚಿವ ಸಂಪುಟ ವಿಸ್ತರಣೆ ಮಾಡುವುದು ವಿಳಂಬವಾಗಿರುವುದರಿಂದ ಆಕಾಂಕ್ಷಿಗಳಲ್ಲಿ ಅಸಮಾಧಾನವಾಗಿರುವುದು ಸಹಜ. ವಿಸ್ತರಣೆಯನ್ನು ಬೇಗ ಮಾಡಲಿ ಎಂದು ಹೇಳುತ್ತೇನೆ. ಅಸಮಾಧಾನಗೊಂಡಿರುವ ಯಾರೂ ನನ್ನೊಂದಿಗೆ ಈವರೆಗೆ ಮಾತನಾಡಿಲ್ಲ. ನಾನು ಕೂಡ ಯಾರೊಂದಿಗೂ ಚಚರ್ಿಸಿಲ್ಲ ಎಂದು ಹೇಳಿದರು.