ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ
ಬೆಂಗಳೂರು 10: ರಾಜ್ಯದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆ ಬಹಿರಂಗ ಪ್ರಚಾರ ಸೋಮವಾರ ಅಂತ್ಯವಾಗಲಿದೆ.
ಚುನಾವಣೆ ಘೋಷಣೆ ಬಳಿಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ನ. 13ಕ್ಕೆ ಮೂರೂ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.