ಉಪಚುನಾವಣೆ ಪ್ರತಿಷ್ಠೆಯ ಕಣವಾಗಿದೆ; ಧ್ವೇಷಗಳನ್ನು ಬಿಟ್ಟು ಬಿಜೆಪಿ ಸೋಲಿಸಲು ಕೆಲಸ ಮಾಡಿ: ಸಿಎಂ ಕರೆ
ಬೆಂಗಳೂರು 16: ಐದು ಕ್ಷೇತ್ರಗಳ ಉಪ ಚುನಾವಣೆ ಪ್ರತಿಷ್ಠೆಯಾಗಿ ಪರಿಣಮಿಸಿದೆ. ವಯಕ್ತಿಕ ಧ್ವೇಷಗಳನ್ನು ಬದಿಗಿಟ್ಟು ಬಿಜೆಪಿ ಸೋಲಿಸುವ ನಿಟ್ಟಿನಲ್ಲಿ ಕೆಲಸಮಾಡುವಂತೆ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಕರೆ ನೀಡಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಸಿಎಂ ಕುಮಾರ ಸ್ವಾಮಿ, ಶಿವಮೊಗ್ಗ ಕ್ಷೇತ್ರಕ್ಕೆ ಜೆಡಿಎಸ್- ಕಾಂಗ್ರೆಸ್ ಒಮ್ಮತದ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಅವರನ್ನು ಕಣಕ್ಕಿಳಿಸಿದ್ದೇವೆ. ಹೀಗಾಗಿ ವಯಕ್ತಿಕ ದ್ವೇಷವನ್ನು ಬದಿಗೊತ್ತಿ ಬಿಜೆಪಿ ವಿರುದ್ಧ ಕೆಲಸ ಮಾಡಬೇಕೆಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ತಿಳಿಸಿದರು.
ಶಿವಮೊಗ್ಗದಲ್ಲಿ ಬಿಜೆಪಿಯಿಂದ ಯಡಿಯೂರಪ್ಪ ಪುತ್ರ ಬಿ ವೈ ರಾಘವೇಂದ್ರ ಕಣದಲ್ಲಿದ್ದು, ಅವರನ್ನು ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಾಳೆ ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ.
ಈ ವೇಳೆ ಮಾತನಾಡಿದ ಮಧು ಬಂಗಾರಪ್ಪ, ವಿಧಾನಸಭೆ ಚುನಾವಣೆ ನಂತರ ಕೆಲ ದಿನಗಳ ಕಾಲ ಬೇಸರವಾಗಿತ್ತು, ಆದರೆ ನನ್ನ ತಂದೆಯೇ ಚುನಾವಣೆಯಲ್ಲಿ ಸೋತಿದ್ದರು, ಅದನ್ನೆಲ್ಲವನ್ನು ನಾವು ಮರೆತಿದ್ದೇವೆ ಈಗ ಈ ಚುನಾವನೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಹೇಳಿದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 