ಧೋನಿಯನ್ನು ಫಾಲೋ ಮಾಡಲು ಹೋಗಿ ನಗೆಗೀಡಾದ ಪಾಕ್ ತಂಡದ ನಾಯಕ
ನವದೆಹಲಿ: ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿಯನ್ನು ಫಾಲೋ ಮಾಡಲು ಹೋಗಿ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಸರ್ಫರಾಜ್ ಅಹಮ್ಮದ್ ನಗೆಗೀಡಾಗಿದ್ದಾರೆ.
ಜಿಂಬಾಬ್ವೆ ವಿರುದ್ಧ ಐದು ಪಂದ್ಯಗಳ ಏಕದಿನ ಸರಣಿಯನ್ನು ವೈಟ್ ವಾಷ್ ಮಾಡಿರುವ ಪಾಕಿಸ್ತಾನ ತಂಡದ ಪರ ಅನೇಕ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಆದರೆ ನಾಯಕ ಸರ್ಫರಾಜ್ ಅಹಮ್ಮದ್ ಸರಣಿಯಲ್ಲಿ ಗಮನಾರ್ಹ ಪ್ರದರ್ಶನ ನೀಡದೆ ಕೊನೆಯ ಪಂದ್ಯದಲ್ಲಿ ಎಂಎಸ್ ಧೋನಿಯನ್ನು ಕಾಪಿ ಮಾಡಲು ಹೋಗಿ ಮುಖಭಂಗ ಅನುಭವಿಸಿದ್ದಾರೆ.
ಧೋನಿಯಂತೆ ವಿಕೆಟ್ ಕೀಪರ್ ಕಮ್ ನಾಯಕನಾಗಿರುವ ಸರ್ಫರಾಜ್ ಅಹಮ್ಮದ್ ಧೋನಿ ರೀತಿ ಬೌಲಿಂಗ್ ಮಾಡಲು ಹೋಗಿ ಮುಖಭಂಗ ಅನುಭವಿಸಿದ್ದಾರೆ. ಜಿಂಬಾಬ್ವೆ ವಿರುದ್ಧದ ಕೊನೆಯ ಪಂದ್ಯದಲ್ಲಿ ಕೀಪಿಂಗ್ ಬಿಟ್ಟು ಬೌಲಿಂಗ್ ಮಾಡಿದ ಸರ್ಫರಾಜ್ 2 ಓವರ್ ನಲ್ಲಿ ಯಾವುದೇ ವಿಕೆಟ್ ಪಡೆಯದೇ 15 ರನ್ ನೀಡಿದ್ದಾರೆ. ಇನ್ನು ತಮ್ಮ ಬೌಲಿಂಗ್ ನಲ್ಲಿ ಸಿಕ್ಸರ್ ಹೊಡೆಸಿಕೊಂಡಿರುವುದು ಸರ್ಫರಾಜ್ ನಗೆಪಾಟಲಿಗೆ ಕಾರಣವಾಗಿದೆ.
ಇನ್ನು 2009ರಲ್ಲಿ ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬಗರ್್ ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಬೌಲಿಂಗ್ ಮಾಡಿದ್ದ ಧೋನಿ ವೆಸ್ಟ್ ಇಂಡೀಸ್ ತಂಡದ ಟ್ರಾವೀಸ್ ಡಾವ್ಲಿನ್ ವಿಕೆಟ್ ಪಡೆದಿದ್ದರು. ಆ ಮೂಲಕ ಧೋನಿ ಖಾತೆಯಲ್ಲಿ ಒಂದು ಅಂತಾರಾಷ್ಟ್ರೀಯ ವಿಕೆಟ್
ದಾಖಲಾಗಿದೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 