ಅಣ್ಣ-ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ ಆಚರಣೆ
The celebration of Raksha Bandhan, symbolizing the bond between brother and sister
ಲಕ್ಷ್ಮೇಶ್ವರ, ಆ.28: ರಕ್ಷಾಬಂಧನವು ಅಣ್ಣ-ತಂಗಿ ಹಾಗೂ ಅಕ್ಕ-ತಮ್ಮಂದಿರ ನಡುವಿನ ಪ್ರೀತಿ, ವಿಶ್ವಾಸ ಮತ್ತು ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವಾಗಿದೆ. ಸಹೋದರ-ಸಹೋದರಿಯರ ಜೀವನದ ಪ್ರತಿಯೊಂದು ಹಂತದಲ್ಲೂ ಪರಸ್ಪರ ಬೆಂಬಲವಾಗಿ ನಿಲ್ಲುವ ಸಂಕೇತವಾಗಿ ರಕ್ಷಾಬಂಧನ ಆಚರಿಸಲಾಗುತ್ತದೆ.
ಈ ಹಿನ್ನೆಲೆಯಲ್ಲಿ ಪಟ್ಟಣದ ವೀರಣ್ಣ ಶಿವಪ್ಪ ಹಡಪದ ಅವರ ಮನೆಯಲ್ಲಿ ಶುಕ್ರವಾರ ರಕ್ಷಾಬಂಧನವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಹೋದರಿಯರು ತಮ್ಮ ಸಹೋದರರಿಗೆ ರಕ್ಷಾ ಬಂಧನ ಕಟ್ಟಿ, ಆರತಿ ಬೆಳಗಿ, ಶುಭ ಹಾರೈಸಿದರು.
ಸಹೋದರರ ಜೀವನ ಸದಾ ಸುಖ, ಶಾಂತಿ ಹಾಗೂ ಯಶಸ್ಸಿನಿಂದ ಕೂಡಿರಲಿ ಎಂದು ಪ್ರಾರ್ಥಿಸಿ, ಪರಸ್ಪರ ಪ್ರೀತಿ ಮತ್ತು ನಂಬಿಕೆ ಇನ್ನಷ್ಟು ಗಟ್ಟಿಯಾಗಲಿ ಎಂದು ಹಾರೈಸಲಾಯಿತು. ಈ ಸಂದರ್ಭದಲ್ಲಿ ಕುಟುಂಬದ ಹಿರಿಯರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 