ಹಾವೇರಿ01: ಮಹಷರ್ಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 13 ರಂದು ನಗರದ ವಾಲ್ಮೀಕಿ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಮಹಷರ್ಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ ಅವರು, ಅಂದು ಬೆಳಿಗ್ಗೆ ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಮಹಷರ್ಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ಹೊರಡಲಿದ್ದು, ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವಾಲ್ಮೀಕಿ ಭವನ ತಲುಪಲಿದೆ.
ಈ ಮೆರವಣಿಗೆಗೆ ಕಲಾ ತಂಡಗಳನ್ನು ಒದಗಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಹಾಗೂ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಗೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಹಷರ್ಿ ವಾಲ್ಮೀಕಿ ಅವರ ಕುರಿತು ಉಪನ್ಯಾಸ ನೀಡಲು ಸಮಾಜದ ಮುಖಂಡರು ಸೂಚಿಸಿರುವ ರಮೇಶ ತವರಿ ಅವರನ್ನು ವಿಶೇಷ ಉಪನ್ಯಾಸಕರಾಗಿ ಆಹ್ವಾನಿಸಲಾಗುವುದು ಹಾಗೂ ಕಳೆದ 2018-19ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ.ಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಸಮುದಾಯ ವಿದ್ಯಾಥರ್ಿಗಳನ್ನು ಸನ್ಮಾನಿಸಲಾಗುವುದು ತಿಳಿಸಿದರು.
ಸಭೆಯಲ್ಲಿ ಜಿ.ಪಂ.ಸದಸ್ಯ ಎನ್.ಎಂ.ಈಟೇರ ಅವರು ಮಾತನಾಡಿ, ಜಿಲ್ಲಾ ವಾಲ್ಮೀಕಿ ಭವನದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ರಸ್ತೆ ನಿಮರ್ಾಣ ಮಾಡಿಕೊಡಬೇಕು, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ನಿಗಮದ ಕಚೇರಿಯನ್ನು ವಾಲ್ಮೀಕಿ ಭವನಕ್ಕೆ ವಗರ್ಾಯಿಸಬೇಕು ಎಂದು ಮನವಿ ಮಾಡಿಕೊಂಡರು.
ಇದೇ ಸಂದರ್ಭದಲ್ಲಿ ಸಮಾಜದ ಮುಖಂಡರು ವಾಲ್ಮೀಕಿ ಜಯಂತಿಯನ್ನು ಅ. 13ರ ಬದಲಿಗೆ 14 ರಂದು ಆಯೋಜಿಸಲು ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡಿಕೊಂಡರು. ಈ ಕುರಿತಂತೆ ಚಚರ್ಿ ತೀಮರ್ಾನ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ಸಭೆಗೆ ತಿಳಿಸಿದರು.
ಸಭೆಯಲ್ಲಿ ಜಿ.ಪಂ.ಸದಸ್ಯ ಎನ್.ಎಂ.ಈಟೇರ, ರತ್ನಾ ಭೀಮಕ್ಕನವರ, ರಮೇಶ ಆನವಟ್ಟಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದೇವರಾಜ್, ವಾತರ್ಾಧಿಕಾರಿ ಡಾ.ಬಿ.ಆರ್.ರಂಗನಾಥ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಜಮಖಾನೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೆಶಕಿ ಶಶಿಕಲಾ ಹುಡೇದ, ಸಮಾಜದ ವಿವಿಧ ಮುಖಂಡರು ಉಪಸ್ಥಿತರಿದ್ದರು.