ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತಿರುವ ರಾಜ್ಯಪಾಲಽ ರಾಜ್ಯಪಾಲರನ್ನು ಕೇಂದ್ರ ಸರ್ಕಾರ ಹಿಂದಕ್ಕೆ ಕೆರಸಿಕೊಳ್ಳಬೇಕು
The central government should pull back the governors who are acting in favor of the Hindi imperiali
ಲೋಕದರ್ಶನ ವರದಿ
ಕೊಪ್ಪಳ 07: ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತಾ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕೆರಸಿಕೊಳ್ಳಬೇಕು ಎಂದು ಕರವೇ ಜಿಲ್ಲಾಧ್ಯಕ್ಷ ಬಿ.ಗೀರೀಶಾನಂದ ಜ್ಞಾನಸುಂದರ ಆಗ್ರಹಿಸಿದರು. ಅವರು ನಗರದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಮಂಗಳವಾರದಂದು ನಡೆದ ಪ್ರತಿಭಟನೆಯ ನೇತೃತ್ವವಹಿಸಿ ಮಾತನಾಡಿದರು.
ರಾಜ್ಯ ಸರ್ಕಾರವು ಎಸ್.ಎಸ್.ಎಲ್.ಸಿ ಪರೀಕ್ಷೇಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದ ನಿರ್ಧಾರವನ್ನು ಮರುಪರೀಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಹಿಂದೆ ಕರ್ನಾಟಕದಲ್ಲಿ ಹಿಂದಿ ಹೇರಿಕೆಯನ್ನು ಶಾಶ್ವತವಾಗಿ ನಡೆಸುವ ಹುನ್ನಾರವಿದೆ. ರಾಜ್ಯಪಾಲರು ತಮ್ಮ ಕಾರ್ಯವ್ಯಾಪ್ತಿಯನ್ನು ಮೀರಿ ಕನ್ನಡಿಗರ ಆಶೋತ್ತರಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ ಅವರು ಕರ್ನಾಟಕದಲ್ಲಿ ಒಂದೇ ಒಂದು ನಿಮಿಷವು ರಾಜ್ಯಪಾಲರಾಗಿ ಉಳಿಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ.
ರಾಜ್ಯಪಾಲರು ದಿನನಿತ್ಯದ ಆಡಳಿತದಲ್ಲಿ ಮೂಗು ತೂರಿಸುವುದು ಅತ್ಯಂತ ಆಕ್ಷೇಪಾರ್ಹವಾದ ಬೆಳವಣಿಗೆಯಾಗಿದೆ. ರಾಜ್ಯ ಸರ್ಕಾರವನ್ನು ಕರ್ನಾಟಕದ ಜನತೆ ಆಯ್ಕೆ ಮಾಡಿದ್ದಾರೆ. ನಾಡಿನ ಜನರ ಬೇಕು, ಬೇಡಗಳನ್ನು ರಾಜ್ಯ ಸರ್ಕಾರ ತಿರ್ಮಾನಿಸುತ್ತದೆ. ಹೀಗಿರುವಾಗ ಸರ್ಕಾರದ ಮುಖ್ಯಸ್ಥರಾಗಿ ಸರ್ಕಾರದ ನಾಡಪರ ಕಾಳಜಿಯ ನಿರ್ಧಾರಗಳನ್ನು ಬೆಂಬಲಿಸುವುದು ಅವರ ಕರ್ತವ್ಯವಾಗಿರುತ್ತದೆ. ಆದರೆ ಅವರು ಹಿಂದಿ ಮಾಫಿಯಾ ಪರವಾಗಿ ಕಾರ್ಯನಿರ್ವಹಿಸುವಂತೆ ತೋರುತ್ತದೆ. ಹೀಗಿರುವಾಗ ಅವರನ್ನು ಕೇಂದ್ರ ಸರ್ಕಾರ ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸಿದರು.
ಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘ ಎಂಬ ಅನಾಮಧೇಯ ಸಂಘಟನೆಯ ಮನವಿಗೆ ತುರ್ತಾಗಿ ರಾಜ್ಯಪಾಲರು ಪ್ರತಿಕ್ರಿಯಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವುದೇ ಒಂದು ದೊಡ್ಡ ಹುನ್ನರವಾಗಿದೆ. ಕರ್ನಾಟಕವನ್ನು ವಲಸೆ ಬರುತ್ತಿರುವ ಹಿಂದಿಭಾಷಿಕರಿಗಾಗಿ ಸುರಕ್ಷಿತ ಸ್ವರ್ಗವನ್ನಾಗಿಸುವ ದೂರಗಾಮಿ ಉದ್ದೇಶಗಳು ಹಿಂದಿ ಮಾಫಿಯಾಗೆ ಇದೆ. ಅದರ ಭಾಗವಾಗಿಯೇ ರಾಜ್ಯಪಾಲರು ಈ ಪತ್ರ ಬರೆದಿದ್ದಾರೆ ಎಂಬುದು ಸ್ಪಷ್ಟವಾಗಿದೆ.
ಕರ್ನಾಟಕದ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ತಿರ್ಮಾನಿಸುತ್ತದೆ. ರಾಜ್ಯ ಸರ್ಕಾರವನ್ನು ಇದಕ್ಕಾಗಿ ನಾವು ಆಯ್ಕೆ ಮಾಡಿ ಕಳುಹಿಸಿದ್ದೇವೆ. ಇದನ್ನು ಪ್ರಶ್ನಿಸಲು ರಾಜ್ಯಪಾಲರು ಯಾರು? ಅವರಿಗೆ ಸಂವಿಧಾನ ಈ ಅವಕಾಶವನ್ನು ನೀಡಿಲ್ಲ. ಹಿಂದಿ ಮಾಫಿಯಾ ಎಷ್ಟು ಬಲಶಾಲಿಯಾಗಿದೆ ಎಂಬುದು ಇದರಿಂದ ಗೊತ್ತಾಗುತ್ತದೆ. ಹುತ್ತದ ಒಳಗೆ ಇನ್ನೇಷ್ಟು ಹಾವುಗಳು ಇವೆಯೋ ಗೊತ್ತಿಲ್ಲ. ಎಲ್ಲವೂ ಹೊರಬರಲಿ ಎಂದು ನಾವು ಕಾಯುತ್ತಿದ್ದೇವೆ. ಕನ್ನಡಿಗರ ಹಿತದೃಷ್ಟಿಗೆ ವಿರುದ್ದವಾಗಿ ಯಾರೇ ಏನೆ ಹೇಳಿದರೂ ಅದನ್ನು ರಾಜ್ಯ ಸರ್ಕಾರ ಪರಿಗಣಿಸಬಾರದು. ನಾವು ಹಿಂದೆ ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ದ ಹೋರಾಡಿದ್ದೆವು. ಈಗ ಹಿಂದಿ ಸಾಮ್ರಾಜ್ಯಶಾಹಿ ನಮ್ಮನ್ನು ಆಳಲು ಯತ್ನಿಸುತ್ತಿದೆ. ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ. ನಮ್ಮ ಪ್ರಾಣ ಹೋದರೂ ನಮ್ಮ ನೆಲದ ಅಸ್ಮಿತೆಯನ್ನು ಉಳಿಸಿಕೊಳ್ಳುತ್ತೇವೆ.
ತೃತೀಯ ಭಾಷೆ ಗ್ರೇಡಿಂಗ್ ವ್ಯವಸ್ಥೆಯ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಇದನ್ನು ಬದಲಿಸುವ ಪ್ರಯತ್ನ ಯಾರೇ ಮಾಡಿದರೂ ರಕ್ತಕ್ರಾಂತಿಯಾಗುತ್ತದೆ. ರಾಜ್ಯಪಾಲರ ಗೆಹ್ಲೋಟ್ ಹಿಂದಿ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಲ್ಲೆಲ್ಲಾ ತೃತೀಯ ಭಾಷೆಯಾಗಿ ಕನ್ನಡ ಕಲಿಸಲು ತಾಕೀತು ಮಾಡಲಿ. ಅಷ್ಟೇಕೆ ಅವರ ಸ್ವಂತ ರಾಜ್ಯವಾದ ಮಧ್ಯಪ್ರದೇಶದಲ್ಲಿ ಈಗಲೋ ಎರಡೇ ಭಾಷೆಗಳನ್ನು ಕಲಿಸಲಾಗುತ್ತಿದೆ.
ಮೂರನೇಯ ಭಾಷೆಯನ್ನಾಗಿ ಕಡ್ಡಾಯವಾಗಿ ಕನ್ನಡವನ್ನು ಕಲಿಸುವಂತೆ ಅಲ್ಲಿನ ಸರ್ಕಾರದ ಮೇಲೆ ಒತ್ತಡ ಹೇರಲಿ. ಅದು ಸಾಧ್ಯವಿಲ್ಲದಿದ್ದರೆ, ಕನ್ನಡಿಗರ ಮೇಲೆ ಯಾಕೆ ಹಿಂದಿ ಹೇರಲು ಯತ್ನಿಸುತ್ತಾರೆ. ಇಂಥ ನಾಡದ್ರೋಹಿ ರಾಜ್ಯಪಾಲ ಕರ್ನಾಟಕದಲ್ಲಿ ಇರಲು ಯೋಗ್ಯರಲ್ಲ. ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಲಿ ಎಂದು ಆಗ್ರಹಿಸಿದರು. ಪ್ರತಿಭಟನಾ ಸ್ಥಳಕ್ಕಾಗಮಿಸಿದ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಗುಂಡೂರು ಅವರ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಜಿಲ್ಲಾ ಯುವ ಘಟಕ ಅಧ್ಯಕ್ಷ ಹನುಮಂತ ಬೆಸ್ತರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಗಪ್ಪ ಮೂಗಿನ್, ಜಿಲ್ಲಾ ಉಪಾಧ್ಯಕ್ಷಶಿವನಗೌಡ ಪಾಟೀಲ ಹಲಗೇರಿ, ಜಿಲ್ಲಾ ಮಹಿಳಾ ಅಧ್ಯಕ್ಷೆ ಭುವನೇಶ್ವರಿ ಮೊಟಗಿ, ಜಿಲ್ಲಾ ಪ್ರಧಾನ ಸಂಚಾಲಕ ಗವಿಸಿದ್ದಪ್ಪ ಚಕ್ಕಡಿ, ಕೊಪ್ಪಳ ತಾಲೂಕ ಅಧ್ಯಕ್ಷ ಹುಸೇನ ಬಾಶಾ ಮಣ್ಣೂರು, ಕನಕಗಿರಿ ತಾಲೂಕಾ ಅಧ್ಯಕ್ಷ ಹರೀಶ ಪೂಜಾರ, ಕುಕನೂರು ತಾಲೂಕ ಅಧ್ಯಕ್ಷ ರಮೇಶ ಚಂಡೂರು, ಕುಷ್ಟಗಿ ತಾಲೂಕ ಅಧ್ಯಕ್ಷ ಪ್ರಕಾಶ ಮನ್ನೇರಾಳ, ಜಿ.ಸಾ.ಜಾಲತಾಣ ಸಂಚಾಲಕ ಸಿದ್ದು ಸಶಿಮಠ, ಮಹಿಳಾ ಘಟಕ ಉಪಾಧ್ಯಕ್ಷೆ ಗಂಗಮ್ಮ ಕುಂಬಾರ, ಕನಕಗಿರಿ ಮಹಿಳಾ ಅಧ್ಯಕ್ಷೆ ಹುಲಿಗೆಮ್ಮ ನಾಯಕ, ಮಹಿಳಾ ಗೌರವಾಧ್ಯಕ್ಷೆ ಶಂಕ್ರಮ್ಮ ಮ್ಯಾಗಳಮನಿ,
ತಾಲೂಕಾ ಉಪಾಧ್ಯಕ್ಷ ಶ್ರೀಧರ ಭೂತಣ್ಣವರ, ರವಿ ಆದಿ, ಶೇಖರ ಭಾಗ್ಯನಗರ, ನಗರ ಅಧ್ಯಕ್ಷ ಪ್ರಫುಲ್ ಪಾಟೀಲ, ಕರವೇ ಮುಖಂಡರಾದ ಮಹೇಶ ನಾಯಕ ಅಗಳಕೇರಾ, ಶರಣು ಮದಲಗಟ್ಟಿ, ಮಲ್ಲು ಬಡಿಗೇರ, ಹುಲ್ಲಪ್ಪ ಟಕ್ಕಳಕಿ, ಮಹ್ಮದ ರಫೀ, ದ್ಯಾಮೇಶ ದದೇಗಲ್, ಶಿವು ಹರಿಜನ, ಶರಣಪ್ಪ ಆಡೂರು, ವಿರುಪಾಕ್ಷಪ್ಪ ದೊಡ್ಡಮನಿ, ರಮೇಶ ಪೂಜಾರ, ವಿರೇಶ ದೊಡ್ಡಮನಿ, ಮಾರುತಿ ದೊಡ್ಡಮನಿ, ಪ್ರಕಾಶ ಗಡ್ಡಿ, ಶಿವು ನಾಯಕ, ರಮೇಶ ಬೂದಗುಂಪಿ, ಮಂಜುನಾಥ ಕಿನ್ನಾಳ, ಮಾರುತಿ ಮುದ್ದಾಬಳ್ಳಿ, ಹನುಮಂತ ಹಟಮಾರಿ, ಅರುಣ ಎಚ್ ಮುದ್ದಾಬಳ್ಳಿ, ಹಾಗೂ ಇನ್ನೂ ಅನೇಕರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 