ಅಕಾಲಿಕ ಆಲಿಕಲ್ಲು ಮಳೆಗೆ ಭತ್ತದ ಬೆಳೆ ಸಂಪೂರ್ಣ ನಾಶ

ಲೋಕದರ್ಶನ ವರದಿ

ಗಂಗಾವತಿ 08: ತಾಲ್ಲೂಕಿನಾದ್ಯಂತ ಸೋಮವಾರ ಸಂಜೆ ಸುರಿದ ಆಲಿಕಲ್ಲು ಮಳೆ ಗಾಳಿಗೆ ಬೆಳೆದು ನಿಂತ ಭತ್ತದ ಬೆಳೆ ಸಂಪೂರ್ಣವಾಗಿ ನೆಲಕ್ಕುರುಳಿದೆ. ಇದರಿಂದ ರೈತರ ಬದುಕು ಸಂಕಷ್ಟಕ್ಕೆ ಗುರಿಯಾಗಿದೆ. ಅಚ್ಚುಕಟ್ಟು ಪ್ರದೇಶದ 80 ಸಾವಿರ ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆ ನಾಶವಾಗಿದ್ದು ಇದರಿಂದ ರೈತರಿಗೆ ಸಂಕಷ್ಟವುಂಟಾಗಿದೆ. ಈಗಾಗಲೇ ಕಟಾವಿಗೆ ಬಂದಿದ್ದ ಭತ್ತ ನಾಶವಾಗಿದೆ. 

ಸಂಸದರು ಹಾಗೂ ಶಾಸಕರ ಭೇಟಿ: ಅಕಾಲಿಕ ಮಳೆಯಿಂದ ನೆಲಕ್ಕುರುಳಿದ ಭತ್ತದ ಗದ್ದೆ ಪ್ರದೇಶಕ್ಕೆ ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮುನವಳ್ಳಿ, ಎಪಿಎಂಸಿ ಅಧ್ಯಕ್ಷ ಸಣ್ಣಕ್ಕಿ ನೀಲಪ್ಪ ಬಿಜೆಪಿ ಮುಖಂಡರು ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ ಮಾತನಾಡಿ ಅಕಾಲಿಕ ಮಳೆಯಿಂದ ರೈತರಿಗೆ ನಷ್ಟವುಂಟಾಗಿದ್ದು ಪ್ರತಿ ಎಕರೆ ಪರಿಹಾರ ನೀಡಬೇಕಿದ್ದು ಕಂದಾಯ ಕೃಷಿ ಇಲಾಖೆ ಜಂಟಿ ಸವರ್ೆ ನಡೆಸಿದ ನಂತರ ಪ್ರತಿ ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುತ್ತದೆ ಎಂದರು. 

ಈ ಸಂದರ್ಭದಲ್ಲಿ ರೈತಪರ ಹೋರಾಟಗಾರರಾದ ತಿಪ್ಪೇರುದ್ರಸ್ವಾಮಿ ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷರಾದ ವಿರೂಪಾಕ್ಷಪ್ಪ ಸಿಂಗನಾಳ ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷರಾದ ಚನ್ನಪ್ಪ ಮಳಿಗಿ ತಹಶಿಲ್ದಾರಾದ ಎಲ್.ಡಿ.ಚಂದ್ರಕಾಂತ ಮುಖಂಡರು ಸೇರಿದಂತೆ ಇತ್ತರರು ಇದ್ದರು.