ಆರ್ಥಿಕ ಅಭಿವೃದ್ಧಿಗೆ ಸಹಕಾರ ಸಂಘಗಳ ಕೊಡುಗೆ ಅಮೂಲ್ಯ

ಆರ್ಥಿಕ ಅಭಿವೃದ್ಧಿಗೆ ಸಹಕಾರ ಸಂಘಗಳ ಕೊಡುಗೆ ಅಮೂಲ್ಯ The contribution of cooperatives to economic development is invaluable.

              ತಾಳಿಕೋಟಿ 18: ಸಹಕಾರ ಸಂಘಗಳು ಜನಸಾಮಾನ್ಯರ ಆರ್ಥಿಕ ಜೀವನ ರೂಪಿಸಲು ಸಾಕಷ್ಟು ಕೆಲಸ ಮಾಡುತ್ತಿವೆ, ಇವತ್ತು ಸಹಕಾರ ಸಂಸ್ಥೆಗಳು ಎಲ್ಲಾ ವಲಯಗಳನ್ನು ವ್ಯಾಪಿಸಿದ್ದು ಶೇಕಡಾ 100ರಷ್ಟು ಗ್ರಾಮೀಣ ಪ್ರದೇಶಗಳಲ್ಲಿ ಸೇವೆಗಳನ್ನು ಒದಗಿಸುತ್ತಿವೆ. ದೇಶದ ಆರ್ಥಿಕತೆಗೆ ಸಹಕಾರ ಸಂಘಗಳ ಕೊಡುಗೆ ಅತ್ಯಮೂಲ್ಯವಾಗಿದೆ ಎಂದು ವಿಜಯಪುರ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎಂ.ಸಿ.ಮನಗೂಳಿ ಹೇಳಿದರು.  

              ಮಂಗಳವಾರ ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ವಿಜಯಪುರ ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತ ವಿಜಯಪುರ, ತಾಳಿಕೋಟಿ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ, ತಾಲೂಕಿನ ಎಲ್ಲಾ ಸಹಕಾರಿ ಸಂಘಗಳು ಬ್ಯಾಂಕುಗಳ ಹಾಗೂ ಇತರೆ ಸಹಕಾರ ಸಂಘಗಳು ಬ್ಯಾಂಕುಗಳು ಹಾಗೂ ಇತರೆ ಸಹಕಾರ ಸಂಘಗಳು ಮತ್ತು ಸಹಕಾರ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಅಂತರಾಷ್ಟ್ರೀಯ ಸಹಕಾರ ವರ್ಷ 2025 ಹಾಗೂ 72ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

              ನಾಲತವಾಡ ವೀರೇಶ್ವರ ಸಹಕಾರ ಬ್ಯಾಂಕ್ ಅಧ್ಯಕ್ಷ ಎಂ.ಎಸ್‌.ಪಾಟೀಲ, ಕವಟಿಮಟ್ಟಿ ಪಿಕೆಪಿಎಸ್ ನಿರ್ದೇಶಕ ಸೋಮನಗೌಡ ಪಾಟೀಲ, ಸಹಕಾರ ಸಂಘಗಳ ನಿವೃತ್ತ ಸಹಾಯಕ ನಿಬಂಧಕರಾದ ಎಸ್‌.ಜಿ.ಕುಂಬಾರ, ಪಿ.ಬಿ.ಕಾಳಗಿ, ನಿವೃತ್ತ ಉಪನ್ಯಾಸಕ ಸಿ. ಸಿಲಿಂಗಪ್ಪ ಮಾತನಾಡಿ ಸಹಕಾರಿ ಸಂಘಗಳು ಅಭಿವೃದ್ಧಿ ಆಗಬೇಕೆಂದರೆ ಪ್ರತಿಯೊಬ್ಬರೂ ನಿಸ್ವಾರ್ಥ ಭಾವನೆ ಹಾಗೂ ಒಮ್ಮನಸಿನಿಂದ ಕಾರ್ಯನಿರ್ವಹಿಸಬೇಕು. ಯಾವ ಕಾರಣಕ್ಕೂ ರಾಜಕೀಯ ಹಸ್ತಕ್ಷೇಪ ಆಗದಂತೆ ನೋಡಿಕೊಳ್ಳಬೇಕು ಎಂದರು.ಹಿರೂರ ಅನ್ನದಾನೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಷ.ಬ್ರ.ಗುರು ಜಯಸಿದ್ದೇಶ್ವರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.  

            ಇದೇ ಸಂದರ್ಭದಲ್ಲಿ ತಾಲೂಕಿನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸಹಕಾರ ಸಂಘಗಳಿಗೆ ಹಾಗೂ ಸಹಕಾರ ಶಿಕ್ಷಣ ನಿಧಿಗೆ ದೇಣಿಗೆ ನೀಡಿದ ಸಂಘಗಳ ಮುಖ್ಯಸ್ಥರಿಗೆ ಯೂನಿಯನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ವಿಜಯಪುರ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಬಸವರಾಜ ಎಂ.ಕುಂಬಾರ ಸಹಕಾರ ಧ್ವಜಾರೋಹಣ ನೆರವೇರಿಸಿದರು.  

               ಸಮಾರಂಭದಲ್ಲಿ ವೀರೇಶ್ವರ ಸಹಕಾರ ಬ್ಯಾಂಕ್ ಅಧ್ಯಕ್ಷ ಎಂ.ಎಸ್‌.ಪಾಟೀಲ, ಅಡತ್ ಮರ್ಚೆಂಟ್ಸ್‌ ಅಸೋಸಿಯೇಷನ್ ಅಧ್ಯಕ್ಷ ಅಶೋಕ ಶೆಟ್ಟಿ, ಮಿಣಜಗಿ ಪಿಕೆಪಿಎಸ್ ಅಧ್ಯಕ್ಷ ಶಶಿಧರ ಬೆಣ್ಣೂರ, ಸಹಕಾರಿ ಬ್ಯಾಂಕ್ ಅಧ್ಯಕ್ಷ ಕೆ.ಸಿ.ಸಜ್ಜನ, ಪುರಸಭೆ ಮಾಜಿ ಸದಸ್ಯ ಪ್ರಭುಗೌಡ ಮದರಕಲ್ಲ, ಸಿಡಿಒ ವಿಜಯಕುಮಾರ ಉತ್ನಾಳ, ಮಲ್ಲಿಕಾರ್ಜುನ ಅಂಗಡಿ, ಆರ್ ಜಿ ಹಿರೂರ, ಜಿಲ್ಲಾ ಸಹಕಾರ ಯೂನಿಯನ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಕಾಶಿಬಾಯಿ ಪಾರಗೊಂಡ, ತಾಳಿಕೋಟಿ ಪಿಕೆಪಿಎಸ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಶಂಕರಗೌಡ ಪಾಟೀಲ ಮತ್ತಿತರರು ಭಾಗವಹಿಸಿದ್ದರು.