ಸಮಾನತೆ, ಸಹೋದರತ್ವ ಬೆಳೆಸುವಲ್ಲಿ ನುಲಿಯ ಚಂದಯ್ಯ, ನಾರಾಯಣ ಗುರುಗಳ ಕೊಡುಗೆ ಅಪಾರ
The contributions of Nuliya Chandayya and Narayana Guru in fostering equality and brotherhood are im
ಬ್ಯಾಡಗಿ, ಆ.29: ಸಮಾಜದಲ್ಲಿ ಸಮಾನತೆ, ಸಹೋದರತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಶ್ರೀ ನುಲಿಯ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಕೊಡುಗೆ ಅಪಾರವಾಗಿದೆ ಎಂದು ತಹಶೀಲ್ದಾರ್ ಚಂದ್ರಶೇಖರ ನಾಯಕ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಶ್ರೀ ನುಲಿಯ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಸಮಾಜದಲ್ಲಿದ್ದ ಅಸಮಾನತೆ, ಜಾತಿ ತಾರತಮ್ಯ ಹಾಗೂ ಮೂಢನಂಬಿಕೆಗಳ ವಿರುದ್ಧ ಇಬ್ಬರೂ ಮಹನೀಯರು ತಮ್ಮದೇ ಆದ ರೀತಿಯಲ್ಲಿ ಜನರಲ್ಲಿ ಜಾಗೃತಿ ಮೂಡಿಸಿದ್ದರು. ಸಮಾನತೆ, ಸಹೋದರತ್ವ ಮತ್ತು ಮಾನವೀಯತೆಯ ಸಂದೇಶವನ್ನು ಸಾರುವ ಮೂಲಕ ಸಮಾಜದ ಪರಿವರ್ತನೆಗೆ ಶ್ರಮಿಸಿದ್ದರು ಎಂದು ಹೇಳಿದರು.
ಮಹನೀಯರ ಜಯಂತಿಗಳನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ಅವರು ಪ್ರತಿಪಾದಿಸಿದ ವಿಚಾರಧಾರೆ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ಚಿಂತನೆಗಳನ್ನು ಮುಂದಿನ ಪೀಳಿಗೆಗೂ ತಲುಪಿಸುವ ಮೂಲಕ ಉತ್ತಮ ಹಾಗೂ ಸಮಾನತೆಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕಚೇರಿ ಸಿಬ್ಬಂದಿಯಾದ ದಾನಗೌಡ, ಕಿರಣ ಹಿರೇಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 