ಎಂಎಲ್ಐಆರ್ ಸಿ ಶಿವಾಜಿ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆ ದೇಶದ ಪ್ರಪ್ರಥಮ ಮಹಿಳಾ ಸೇನಾ ಭರ್ತಿ ಇಂದಿನಿಂದ
ಬೆಳಗಾವಿ, 31: ದೇಶದ ಮೊಟ್ಟ ಮೊದಲ ಮಹಿಳಾ ಸೇನಾ ಭತರ್ಿ ರ್ಯಾಲಿ ಆಗಸ್ಟ್ 1ರಿಂದ 5 ರವರೆಗೆ ಬೆಳಗಾವಿಯಲ್ಲಿ ನಡೆಯಲಿದೆ.
ನಗರದಲ್ಲಿರುವ ಮರಾಠಾ ಲಘು ಪದಾತಿದಳ(ಎಂ.ಎಲ್.ಐ.ಆರ್.ಸಿ) ಕೇಂದ್ರದಲ್ಲಿರುವ ಶಿವಾಜಿ ಕ್ರೀಡಾಂಗಣದಲ್ಲಿ ಯರ್ಾಲಿ ನಡೆಯಲಿದೆ.
ದೇಶದಲ್ಲಿ ಮೊದಲ ಬಾರಿ ನಡೆಯುತ್ತಿರುವ ಮಹಿಳಾ ಮಿಲಿಟರಿ ಪೊಲೀಸ್ ಭರ್ತಿಯ ಸಿದ್ಧತೆ ಕುರಿತು ನೇಮಕಾತಿ ವಿಭಾಗದ ಉಪ ಮಹಾನಿದರ್ೇಶಕರಾದ ದಿಪೇಂದ್ರ ರಾವತ್ ಅವರು ಮಾಹಿತಿಯನ್ನು ನೀಡಿದರು.
ದಕ್ಷಿಣ ಭಾರತದ ಐದು ರಾಜ್ಯಗಳಾದ ಕನರ್ಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳದ ಅಭ್ಯಥರ್ಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್, ನಿಕೊಬಾರ್ ದ್ವೀಪಗಳು, ಪಾಂಡಿಚೇರಿ ರಾಜ್ಯದ ಲಕ್ಷದೀಪ ಹಾಗೂ ಮಾಹೆ ಜಿಲ್ಲೆಯ ಅಭ್ಯಥರ್ಿಗಳು ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.
ರ್ಯಾಲಿಯಲ್ಲಿ ಪಾಲ್ಗೊಳ್ಳಲು ಹೆಸರು ನೋಂದಾಯಿಸಿದ್ದ ಸುಮಾರು ಹದಿನೈದು ಸಾವಿರ ಅಭ್ಯಥರ್ಿಗಳ ಪೈಕಿ ಮೆಟ್ರಿಕ್ಯುಲೇಷನ್ ಮೆರಿಟ್ ಆಧಾರದ ಮೇಲೆ ಮೂರು ಸಾವಿರ ಅಭ್ಯರ್ಥಿ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಅವರು ಮಾತ್ರ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.
ಈಗಾಗಲೇ ನೋಂದಣಿ ಮಾಡಿಸಿರುವ ಅಭ್ಯರ್ಥಿಗಳು 7 ಗಂಟೆಗೆ ವರದಿ ಮಾಡಿಕೊಳ್ಳಬೇಕು. ಪರ ಊರುಗಳಿಂದ ಬರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ರೈಲು ನಿಲ್ದಾಣದಲ್ಲಿ ಮಾಹಿತಿ, ಸ್ವಾಗತ ಕೇಂದ್ರ ಸ್ಥಾಪನೆ ಮಾಡಲಾಗಿರುತ್ತದೆ.
ಜಿಲ್ಲಾಡಳಿತ ಸಂಪೂರ್ಣ ಸಹಕಾರ:
ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ ನಡೆಸಲಾಗುತ್ತಿರುವ ಮಹಿಳಾ ಮಿಲಿಟರಿ ಪೊಲೀಸ್ ಭತರ್ಿ ರ್ಯಾಲಿಯನ್ನು ಅಚ್ಚುಕಟ್ಟಾಗಿ ನಡೆಸಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯು ಸಂಪೂರ್ಣ ಸಹಕಾರ ನೀಡಿದ್ದು, ಆಯ್ಕೆ ಪ್ರಕ್ರಿಯೆ ಸುಗಮವಾಗಿ ನಡೆಸಲು ಸೂಕ್ತ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ
ಎಂದರು.
ಆಯ್ಕೆ ಪ್ರಕ್ರಿಯೆಯು ಸಂಪೂರ್ಣ ಪಾರದರ್ಶಕವಾಗಿ ನಡೆಯಲಿದೆ. ಅಭ್ಯಥರ್ಿಗಳು ಯಾವುದೇ ಮೂರನೇ ವ್ಯಕ್ತಿಗಳ ಮಾತಿಗೆ ಕಿವಿಗೊಡಬಾರದು ಎಂದು
ತಿಳಿಸಿದರು.
ಅಭ್ಯಥರ್ಿಗಳಿಗೆ ತೊಂದರೆಯಾಗದಂತೆ ಪಾವತಿ ಆಧಾರದ ಮೇಲೆ ಊಟೋಪಹಾರ ವ್ಯವಸ್ಥೆ ಮಾಡಲಾಗಿದೆ. ಇದಲ್ಲದೇ ಕುಡಿಯುವ ನೀರು ಮತ್ತು ಶೌಚಾಲಯ ಮತ್ತಿತರ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿದರ್ೇಶಕರಾದ ಈಶ್ವರ್ ಕುಡೊಳ್ಳಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 