ನವದೆಹಲಿ 28: ದೇಶದ ಶ್ರೇಷ್ಠ ಅರ್ಥ ಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರ ಅಂತ್ಯ ಸಂಸ್ಕಾರ ಇಂದು ದೆಹಲಿಯ ನಿಗಮ ಬೋಧ್ ಘಾಟ್‌ನಲ್ಲಿ ನಡೆದಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಮತ್ತು ಸಿಖ್ ಧರ್ಮದ ಸಂಪ್ರದಾಯದಂತೆ ಸಿಂಗ್ ಅವರ ಅಂತಿಮ ಸಂಸ್ಕಾರ ನಡೆಯಿತು.
ಡಾ.ಸಿಂಗ್ ಅವರ ಪಾರ್ಥಿವ ಶರೀರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಸಚಿವ ಕಿರಣ್ ರಿಜಿಜು ಸೇರಿದಂತೆ ಹಲವು ರಾಜಕೀಯ ಗಣ್ಯರು ಅಂತಿಮ ಪುಪ್ಪ ನಮನ ಸಲ್ಲಿಸಿದರು.
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಏಳು ದಿನಗಳ ಶೋಕಾಚರಣೆ ಘೋಷಿಸಿತ್ತು. ಅಲ್ಲದೇ ಸರ್ಕಾರಿ ಕಚೇರಿಗಳಲ್ಲಿ ಅರ್ಧಮಟ್ಟಕ್ಕೆ ರಾಷ್ಟ್ರಧ್ವಜ ಹಾರಿಸುವಂತೆ ಸೂಚಿಸಿತ್ತು. ಕಾಂಗ್ರೆಸ್ ಪಕ್ಷ ಕೂಡಾ ತನ್ನೆಲ್ಲಾ ನಿಗದಿತ(ಜನವರಿ 3ರವರೆಗೆ) ಕಾರ್ಯಕ್ರಮಗಳನ್ನು ರದ್ದುಪಡಿಸಿತ್ತು.