ಆದಿತ್ಯ ರಾವ್ ಲಾಕರನಲ್ಲಿ ದೊರಕಿದ್ದು ಸೈನೇಡ್ ಎಂಬುದು ದೃಢ
ಮಂಗಳೂರು, ಜ 27ಮಂಗಳೂರು ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಆರೋಪಿ ಆದಿತ್ಯ ರಾವ್ ವಿಚಾರಣೆ ತೀವ್ರಗೊಂಡಿದ್ದು, ಆತನ ಬ್ಯಾಂಕ್ ಲಾಕರ್‌ನಲ್ಲಿ ಪತ್ತೆಯಾದ ವಸ್ತು ಸೈನೇಡ್ ಎಂಬುದು ಈಗ ದೃಢಪಟ್ಟಿದೆ.ವಿಧಿವಿಜ್ಞಾನ ಪ್ರಯೋಗಾಲಯ ನೀಡಿರುವ ಪ್ರಾಥಮಿಕ ವರದಿಯಲ್ಲಿ ಈ ವಿಷಯ ಬಹಿರಂಗಗೊಂಡಿದೆ. ಹೀಗಾಗಿ ಬಾಂಬರ್ ಆದಿತ್ಯ ನನ್ನು ಸೈನೇಡ್ ಕುರಿತು ಮಂಗಳೂರು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸೈನೇಡ್ ಆತನಿಗೆ ಎಲ್ಲಿಂದ ದೊರಕಿತ್ತು? ಆತನೇ ವಸ್ತುಗಳನ್ನು ಬಳಸಿ ಸೈನೇಡ್ ತಯಾರಿಸಿದ್ದಾನಾ? ಯಾವ ಉದ್ದೇಶಕ್ಕಾಗಿ ಅದನ್ನು ಬ್ಯಾಂಕ್ ಲಾಕರ್‌ನಲ್ಲಿ ಏಕೆ ಇಡಲಾಗಿತ್ತು ಎಂಬಿತ್ಯಾಗಿ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ. ಇಂದು ಪೌರತ್ವ ತಿದ್ದುಪಡಿ ಕಾಯ್ದೆ ಪರ ಕೇಂದ್ರ ಸಚಿವ ರಾಜ್ ನಾಥ್ ಸಿಂಗ್ ಅವರು ಮಂಗಳೂರಿನಲ್ಲಿರುವ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿಭದ್ರತೆಯನ್ನು ಮಂಗಳೂರು ಉತ್ತರ ವಿಭಾಗದ ಎಸಿಪಿ ಬೆಳ್ಳಿಯಪ್ಪ ಅವರು ವಹಿಸಿರುವ ಹಿನ್ನೆಲೆಯಲ್ಲಿ, ಆದಿತ್ಯ ರಾವ್ ನನ್ನು ಇಂದು ಕಿರಿಯ ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಸಮಾವೇಶ ಮುಗಿದ ಬಳಿಕ ಮತ್ತೆ ಬೆಳ್ಳಿಯಪ್ಪ ಅವರು ಆದಿತ್ಯನನ್ನು ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಯನ್ನು ಶನಿವಾರ ಉಡುಪಿಗೆ ಕರೆತಂದಿದ್ದ ಮಂಗಳೂರಿನ ಪೊಲೀಸರು ಹಲವೆಡೆ ಸ್ಥಳ ಮಹಜರು ನಡೆಸಿದರು. ಕರ್ಣಾಟಕ ಬ್ಯಾಂಕ್ ಕುಂಜಿಬೆಟ್ಟು ಶಾಖೆಗೆ ಆದಿತ್ಯ ರಾವ್ ಅನ್ನು ಕರೆತರಲಾಗಿತ್ತು. ಆತನ ಲಾಕರ್‌ನ ಕೀಲಿ ಕಳೆದು ಹೋಗಿದ್ದರಿಂದ ಕೀ ರಿಪೇರಿ ಮಾಡುವ ವ್ಯಕ್ತಿಯನ್ನು ಕರೆಸಿ ಲಾಕರ್ ಬಾಗಿಲು ತೆರೆಯಲಾಗಿತ್ತು. ಬಳಿಕ ಅದರೊಳಗಿದ್ದ ವಸ್ತು ವಶಕ್ಕೆ ತೆಗೆದುಕೊಳ್ಳಲಾಯಿತ್ತು. ನಂತರ ಲಾಕರ್ ನಲ್ಲಿ ದೊರಕಿದ್ದ ಪುಡಿಯನ್ನು ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಮಂಗಳೂರು ಬಜ್ಪೆ ವಿಮಾನದ ಟಿಕೇಟ್ ಕೌಂಟರ್ ಬಳಿ ಬ್ಯಾಗ್ ನಲ್ಲಿ ಸಜೀವ ಬಾಂಬ್ ಇಟ್ಟ ತಾನೇ ಪರಾರಿಯಾಗಿರುವುದಾಗಿ ಆರೋಪಿ ಆದಿತ್ಯ ರಾವ್, ಬೆಂಗಳೂರು ಪೊಲೀಸರಿಗೆ ಶರಣಾಗಿದ್ದನು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 