ಸೋದರನ ರಕ್ಷಿಸಿ ತಂದೆಗೆ ಗುಂಡಿಕ್ಕಿ ಕೊಂದ ಪುತ್ರಿ
ಮಥುರಾ, ಫೆ 11 ಕೌಟುಂಬಿಕ ಕಲಹದಿಂದ ಪತ್ನಿ ಹಾಗೂ ಪುತ್ರಿಯ ಗುಂಡು ಹಾರಿಸಲು ನಡೆಸಲು ಯತ್ನಿಸಿದ ತಂದೆಯಿಂದ ಪಿಸ್ತೂಲ್ ಕಸಿದು ಅದರಿಂದಲೇ ಗುಂಡು ಹಾರಿಸಿ ಆತನನ್ನು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮಥುರಾ ಜಿಲ್ಲೆ ಮೈಥಿಲಿಯ ನೌಹ್ಜೀಲ್ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸ್ ಮೂಲಗಳು ಮಂಗಳವಾರ ಹೇಳಿವೆ.
ಮೈಥಿಲಿಯ ನೌಹ್ಜೀಲ್ ನ ಪ್ರದೇಶದಲ್ಲಿ ವಾಸವಾಗಿದ್ದ ನಿವೃತ್ತ ಸೇನಾಯೋಧ ಚೇತ್ರಾಮ್ (40) ಹತ್ಯೆಗೊಳಗಾದ ವ್ಯಕ್ತಿ. ಕೌಟುಂಬಿಕ ವಿಷಯದಲ್ಲಿ ಪತ್ನಿ ಹಾಗೂ ಮಕ್ಕಳ ನಡುವೆ ನಡೆದ ಮಾತಿನ ಚಕಮಕಿ ತೀವ್ರ ಸ್ವರೂಪಕ್ಕೆ ತಿರುಗಿದ್ದು, ಕುಪಿತಗೊಂಡ ನಿವೃತ್ತ ಯೋಧ ಚೇತ್ರಾಮ್, ಪತ್ನಿ ರಾಜಕುಮಾರಿ(38), 18 ವರ್ಷದ ಪುತ್ರಿಯ ಮೇಲೆ ಪಿಸ್ತೂಲ್ ನಿಂದ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಪ್ರತಿರೋಧ ವ್ಯಕ್ತಪಡಿಸಿದ 14 ವರ್ಷದ ಪುತ್ರನ ಮೇಲೆ ಗುಂಡು ಹಾರಿಸಲು ಮುಂದಾದ, ತಕ್ಷಣವೇ ಎಚ್ಚೆತ್ತುಕೊಂಡ ಗಾಯಗೊಂಡಿದ್ದ ಪುತ್ರಿ, ತಂದೆಯ ಕೈಯಿಂದ ಪಿಸ್ತೂಲ್ ಕಸಿದು ಅದರಿಂದಲೇ ಆತನ ಮೇಲೆ ಗುಂಡು ಹಾರಿಸಿದ್ದಾಳೆ ಇದರಿಂದಾಗಿ ತಂದೆ ಮೃತ ಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿಯಿಂದ ಗಾಯಗೊಂಡಿರುವ ತಾಯಿ ಹಾಗೂ ಮಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 