ಡಿಕೆಚೌಟ ನಿಧನಕ್ಕೆ ಸಾಣೇಹಳ್ಳಿ ಶ್ರೀಗಳ ಸಂತಾಪ
ಲೋಕದರ್ಶನವರದಿ
ಸಾಣೇಹಳ್ಳಿ 19; ಇಂದು ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ನಿಧನರಾದ ಹಿರಿಯ ಚೇತನ, ರಂಗ ಪೋಷಕ, ರಂಗಕಮರ್ಿ, ರಂಗ ಸಂಘಟಕ, ನಾಟಕಕಾರ ಡಿ ಕೆ ಚೌಟ ನಿಧನಕ್ಕೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳವರು ಸಂತಾಪ ಸೂಚಿಸುತ್ತ ಚೌಟ ಮತ್ತು ನಮ್ಮ ನಡುವಿನ ಒಡನಾಟ 25 ವರ್ಷಗಳಷ್ಟು ಹಿಂದಿನದು. ಅವರನ್ನು ನಮಗೆ ಪರಿಚಯಿಸಿದವರು ಸಿಜಿಕೆಯವರು.
ಚೌಟ ಅವರ ನಿಧನದ ವಾರ್ತೆ ತಿಳಿದು ತುಂಬ ವೇದನೆಯಾಯ್ತು. ಕನ್ನಡ ಮತ್ತು ತುಳು ಭಾಷೆಯ ಸಾಂಸ್ಕೃತಿಕ ಲೋಕದ ಕೊಂಡಿಯೊಂದು ಕಳಚಿದಂತಾಯ್ತು.
ಅನೇಕ ರಂಗಚಟುವಟಿಕೆಗಳ ಹಿಂದಿನ ಶಕ್ತಿಯಾಗಿ ಕೆಲಸ ಮಾಡುತ್ತಿದ್ದರು. ನಮ್ಮ ಮತ್ತು ನಮ್ಮ ಕಲಾ ಸಂಘದ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದರು.
ಒಂದು ತಿಂಗಳ ಹಿಂದೆಯಷ್ಟೇ ಬೆಂಗಳೂರಿನ ಅವರ ಮನೆಗೆ ಹೋಗಿ ಆರೋಗ್ಯ ವಿಚಾರಿಸಿಕೊಂಡು ಬಂದಿದ್ದೆವು. ಅವರ ಅಗಲುವಿಕೆಯಿಂದ ಆಗಿರುವ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಅವರ ಕುಟುಂಬದವರಿಗೆ ಕರುಣಿಸಲಿ ಎಂದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 