ಮೈಸೂರು, ಅ 14: ವಿದ್ಯುತ್ ತಂತಿ ತುಳಿದು ಯುವಕನೋರ್ವ ಮೃತಪಟ್ಟಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಅಬ್ಬಳತಿ ಬಿ ಕಾಲೋನಿಯ 18 ವರ್ಷದ ಮಂಜು ಮೃತ ದುರ್ದೈವಿ. ಹರಿದು ತುಂಡಾಗಿ ಬಿದ್ದದ್ದ ವಿದ್ಯುತ್ ತಂತಿಯನ್ನು ಗಮನಿಸದ ಮಂಜು ಆಕಸ್ಮಿಕವಾಗಿ ವಿದ್ಯುತ್ ತಂತಿ ತುಳಿದಾಗ ವಿದ್ಯುತ್ ಆಘಾತದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.