ನವದೆಹಲಿ, ಮೇ 18,ದೇಶದಲ್ಲಿ ಕಳೆದ 24 ತಾಸಿನಲ್ಲಿ 5,242 ಹೊಸ ಪ್ರಕರಣಗಳು ವರದಿಯಾಗುವುದರೊಂದಿಗೆ ಕೊರೊನವೈರಸ್‍ನ ದೃಢಪಟ್ಟ ಪ್ರಕರಣಗಳ ಸಂಖ್ಯೆ 96,169ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ನವೀಕೃತ ಮಾಹಿತಿ ತಿಳಿಸಿದೆ. ದೇಶಾದ್ಯಂತ ಕಳೆದ 24 ತಾಸಿನಲ್ಲಿ 157 ಮಂದಿ ಮಾರಕ ಸೋಂಕಿಗೆ ಬಲಿಯಾಗುವುದರೊಂದಿಗೆ ಒಟ್ಟು ಸಾವಿನ ಸಂಖ್ಯೆ 3,029ಕ್ಕೆ ಏರಿದೆ. ಸದ್ಯ ದೇಶದಲ್ಲಿ ವೈದ್ಯಕೀಯ ಮೇಲ್ವಿಚಾರಣೆಯಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 56,316ರಷ್ಟಿದೆ. ಭಾನುವಾರ 2,715 ಸೋಂಕಿತರು ಚೇತರಿಸಿಕೊಳ್ಳುವುದರೊಂದಿಗೆ ಗುಣಮುಖರಾದವರ ಸಂಖ್ಯೆ 36,824ಕ್ಕೆ ಏರಿದೆ. ಈ ಮಧ್ಯೆ, ದೇಶ ಇಂದು ಲಾಕ್‍ಡೌನ್‍ನ ನಾಲ್ಕನೇ ಹಂತಕ್ಕೆ ಪ್ರವೇಶಿಸುವುದರೊಂದಿಗೆ ಗೃಹಸಚಿವಾಲಯದ ಪರಿಷ್ಕೃತ ಮಾರ್ಗಸೂಚಿಗಳ ಅನುಸಾರ ನಿರ್ಬಂಧಗಳನ್ನು ಸಡಿಲಿಸಲು ರಾಜ್ಯಗಳಿಗೆ ಅಧಿಕಾರ ನೀಡಲಾಗಿದೆ.