ನೆನೆಗುದಿಗೆ ಬಿದ್ದಿದ್ದ ರಸ್ತೆ ಕಾಮಗಾರಿ ಶಾಸಕರ ಪ್ರಯತ್ನದಿಂದ ಶೀಘ್ರ ಪ್ರಾರಂಭ
The delayed road works started soon with the efforts of MLAs
ಸಿಂದಗಿ 25: ನಗರದಲ್ಲಿ ಹಾಗೂ ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಸಿಂದಗಿ ಯಿಂದ ಕೊಡಂಗಲ್ ರಸ್ತೆ ಕುರಿತು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಅಗಸ್ಟ್ 24ರಂದು ಸಿಂದಗಿಗೆ ಆಗಮಿಸಿದ ಸಂದರ್ಭದಲ್ಲಿ 25 ಕೋಟಿ ರೂಪಾಯಿ ಅನುದಾನ ನೀಡಬೇಕು ಎಂದು ಸಚಿವರಲ್ಲಿ ಮನವಿ ಮಾಡಲಾಗಿದೆ ಇದನ್ನು ತಿಳಿದುಕೊಂಡ ಬಿಜೆಪಿಗರು ಈ ರಸ್ತೆಯ ಬಗ್ಗೆ ಪ್ರತಿಭಟನೆ ಮಾಡಿ ನಮ್ಮಿಂದಲೇ ಆಗಿದೆ ಎನ್ನುವದನ್ನು ಬಿಂಬಿಸಿಕೊಳ್ಳುವ ಚಾಳಿಗೆ ಬಂದು ನಿಂತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಪೂಜಾರಿ ತಿರುಗೇಟು ನೀಡಿದರು.
ಪಟ್ಟಣದ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾಯಾಲಯದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುಮಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರಸ್ತೆ ನಮ್ಮ ಶಾಸಕರ ಪ್ರಯತ್ನದಿಂದ ಆದಷ್ಟು ಬೇಗ ರಸ್ತೆ ಕಾಮಗಾರಿ ಪ್ರಾರಂಭವಾಗಲಿದೆ. ಬಿಜೆಪಿ ಮಂಡಲದ ವತಿಯಿಂದ ರಸ್ತೆತಡೆ ಮಾಡಲು ಮುಂದಾದ ಬಿಜೆಪಿ ಮಂಡಲ ಅಧ್ಯಕ್ಷರೆ ನೀವು ಸುಮಾರು ವರ್ಷಗಳಿಂದ ತಾವು ಇದೆ ರಸ್ತೆಗೆ ಹಾದು ಹೋಗುತ್ತಿದ್ದಿರಿ ಆಗ ಈ ಗುಂಡಿಗಳು ಕಾಣಲಿಲ್ಲವೇ ನೀವು ಈ ರಸ್ತೆ ಕಾರ್ಯ ಯಾಕೆ ಮಾಡಲಿಲ್ಲ ಬಿಜೆಪಿ ಸರ್ಕಾರ ಸುಮಾರು 12 ವರ್ಷಗಳ ಕಾಲ ಅಧಿಕಾರ ಅವಧಿಯಲ್ಲಿ ಯಾಕೆ ಮಾಡಲಿಲ್ಲ, ಈ ರಸ್ತೆಗೆ ಸಂಬಂಧ ಪಟ್ಟ ಹಾಗೆ ಶಾಸಕರು ಉತ್ತಮ ರೀತಿಯಲ್ಲಿ ಕಾರ್ಯ ಮಾಡುತ್ತಾ ಬಂದಿದ್ದಾರೆ, ಮುಂದೇಯು ಮಾಡುತ್ತಾರೆ ಎನ್ನುವ ಭರವಸೆ ನಮಗಿದೆ ಎಂದರು.
ಈ ಪತ್ರಿಕಾಗೋಷ್ಠಿಯಲ್ಲಿ ಪುರಸಭೆ ಸದಸ್ಯ ಸಾಯಬಣ್ಣ ಪುರದಾಳ, ಮುಖಂಡ ಪ್ರವೀಣ್ ಕಂಟಕೊಂಡ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 