ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ
The development of agriculture has been officially launched.
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ
ಗದಗ 30 : 2025-26 ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆ ಅಂಗವಾಗಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಐ.ಸಿ.ಎ.ಆರ್-ಕೆ.ಎಚ್.ಪಾಟೀಲ ಕೃಷಿ ವಿಜ್ಞಾನ ಕೇಂದ್ರವು ಕರ್ನಾಟಕ ರಾಜ್ಯ ಕೃಷಿ ಇಲಾಖೆ ಹಾಗೂ ಇತರೆ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ದಿನಾಂಕ 29-05-2025 ರಿಂದ 12-06-2025 ರ ವರೆಗೆ ಗದಗ ಜಿಲ್ಲೆಯ ಎಲ್ಲ ತಾಲೂಕುಗಳ ವಿವಿಧ ಗ್ರಾಮಗಳಲ್ಲಿ ಕೃಷಿ ತರಬೇತಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಕರ್ನಾಟಕ ರಾಜ್ಯ ಕೃಷಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದೆ. 29-05-2025 ರಂದು ಮೊದಲನೇಯ ದಿನ ಶಿಂಗಟರಾಯನಕೇರಿ ಗ್ರಾಮದಲ್ಲಿ ಜಾಥಾದೊಂದಿಗೆ ವಿಜೃಂಭಣೆಯಿಂದ ಪ್ರಾರಂಭವಾಯಿತು. ರೋಣ ತಾಲೂಕಿನ ಮೂರು ಗ್ರಾಮಗಳಾದ ನರೇಗಲ್ಲ, ಚಿಕ್ಕಮಣ್ಣೂರು, ಸವಡಿ ಮತ್ತು ನಿಡಗುಂದಿಕೊಪ್ಪ ಗ್ರಾಮಗಳಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಆಯೋಜಿಸಲಾಗಿತ್ತು. ಐ.ಸಿ.ಎ.ಆರ್-ಗೋಡಂಬಿ ಸಂಶೋಧನಾ ನಿರ್ದೇಶನಾಲಯದ ವಿಜ್ಞಾನಿಗಳು, ಕರ್ನಾಟಕ ಸರಕಾರದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ಕೃಷಿ ಅಧಿಕಾರಿಗಳು, ಆತ್ಮ ಸಿಬ್ಬಂದಿ, ಕೃಷಿ ಸಖಿಯರು, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರುಗಳು, ಪಶು ಸಖಿಯರು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಕೃಷಿಕ ಸಮಾಜದ ಪ್ರತಿನಿಧಿಗಳು, ರೈತ ಮುಖಂಡರು, ರೈತ ಉತ್ಪಾದಕ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಈ ಅಭಿಯಾನದಲ್ಲಿ ವಿವಿಧ ತಂತ್ರಜ್ಞಾನಗಳಾದ ಬೀಜೋಪಚಾರ, ಸುಧಾರಿತ ತಳಿಗಳು, ತೋಟಗಾರಿಕೆ ಬೆಳೆಗಳು, ಸಿರಿಧಾನ್ಯ ಹಾಗೂ ಅವುಗಳ ಮಹತ್ವ, ಕೃಷಿ ಯಂತ್ರೋಪಕರಣಗಳು, ಸಮಗ್ರ ಕೃಷಿ ಪದ್ಧತಿಗಳ ತರಬೇತಿ ನೀಡಲಾಯಿತು. ಮುಂಗಾರು ಬೆಳೆಗಳ ಬೇಸಾಯ ಕ್ರಮಗಳು, ಕೀಟ ಹಾಗೂ ರೋಗ ನಿರ್ವಹಣೆ ಬಗ್ಗೆ ಮಾಹಿತಿ ಕೈಪಿಡಿ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಯೋಜನೆಗಳ ಬಗ್ಗೆ ಹಸ್ತಪ್ರತಿಗಳನ್ನು ವಿತರಿಸಲಾಯಿತು. ಮುಂಡರಗಿ ಹಾಗೂ ರೋಣ ತಾಲೂಕಿನ ಒಟ್ಟು 7 ಗ್ರಾಮಗಳ 750 ಜನ ರೈತ ಹಾಗೂ ರೈತ ಮಹಿಳೆಯರು ಈ ಅಭಿಯಾನದಲ್ಲಿ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 