ಜಿಲ್ಲೆಯ ಕಲೆ ಸಂಸ್ಕೃತಿಯನ್ನು ಯುವ ಪೀಳಿಗೆಗೆ ಪರಿಚಯಿಸಬೇಕು : ಸಿಇಓ ಡಾ.ದೀಲೀಷ್ ಶಶಿ
The district's art and culture should be introduced to the younger generation: CEO Dr. Dileesh Shash
ಕಾರವಾರ, ಡಿ.23 :- ಉತ್ತರ ಕನ್ನಡ ಜಿಲ್ಲೆಯ ಕಲೆ, ಸಂಸ್ಕೃತಿ ಪರಂಪರೆಯನ್ನು ಯುವ ಪೀಳಿಗೆಗೆ ಪರಿಚಯಿಸಬೇಕು , ಇದೇ ಉದ್ದೇಶದಿಂದ ಕರಾವಳಿ ಉತ್ಸವ ಸಂದರ್ಭದಲ್ಲಿ ಛಾಯಾ ಚಿತ್ರ ಹಾಗೂ ರೀಲ್ಸ್ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಏರಿ್ಡಸಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದೀಲೀಷ್ ಶಶಿ ಹೇಳಿದರು.
ಅವರು ಮಂಗಳವಾರ ನೂತನ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧದಲ್ಲಿ, ಕರಾವಳಿ ಉತ್ಸವದ ಅಂಗವಾಗಿ ಆಯೋಜಿಸಿದ್ದ ಛಾಯಾ ಚಿತ್ರ ಹಾಗೂ ರೀಲ್ಸ್ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಪ್ರವಾಸೋದ್ಯಮ ಹೆಚ್ಚಾಗಿರುವುದರಿಂದ ಪ್ರಮುಖ ಪ್ರವಾಸಿ ಸ್ಥಳಗಳ, ಜಲಪಾತಗಳ, ಕಡಲತೀರಗಳ, ಪಾರಂಪರಿಕ ತಾಣಗಳ ಛಾಯಾಚಿತ್ರ ನೀಡಿದಲ್ಲಿ, ಅವುಗಳನ್ನು ವೇದಿಕೆಯಲ್ಲಿ ಪ್ರದರ್ಶಿಸಲಾಗುವುದು. ಈಗಾಗಲೇ ಕೆಲವು ಛಾಯಾಗ್ರಾಹಕರು ಛಾಯಚಿತ್ರಗಳನ್ನು ಮತ್ತು ರೀಲ್ಸ್ಗಳನ್ನು ನೀಡಿದ್ದಾರೆ. ಈ ಸ್ಪರ್ಧೆ ಮತ್ತು ಪ್ರದರ್ಶನದಲ್ಲಿ ಇನ್ನೂ ಆಕರ್ಷಣೆಯ, ಇತಿಹಾಸಯುಳ್ಳ ಛಾಯಾ ಚಿತ್ರಗಳನ್ನು ಸಂಗ್ರಹಿಸುವ ಪ್ರಯತ್ನ ಮಾಡಲಾಗುತ್ತಿದೆ ಇಂತಹ ಅಪರೂಪದ ಮತ್ತು ಐತಿಹಾಸಿಕ ಛಾಯಾ ಚಿತ್ರಗಳು ಇದ್ದಲ್ಲಿ ಪ್ರದರ್ಶನಕ್ಕೆ ಇಡುವಂತೆ ತಿಳಿಸಿದ ಅವರು, ಉತ್ತಮ ಛಾಯ ಚಿತ್ರ ಮತ್ತು ರೀಲ್ಸ್ಗಳನ್ನು ಗುರುತಿಸಿ ಕೊನೆಯ ದಿನ ಬಹುಮಾನವನ್ನು ನೀಡಲಾಗುವುದು ಎಂದರು.
ನಿಗದಿತ ದಿನಾಂಕದೊಳಗೆ ಆಗಮಿಸಿದ ಛಾಯಾಚಿತ್ರ ಮತ್ತು ರೀಲ್ಸ್ಗಳನ್ನು ಈ ಸ್ಪರ್ಧೇಗೆ ಪರಿಗಣಿಸಲಾಗುವುದು. ನಂತರ ಬಂದ ಛಾಯಾಚಿತ್ರ ಮತ್ತು ರೀಲ್ಸ್ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು, ಉತ್ತಮವಾದ ರೀಲ್ಸ್ ಗಳನ್ನು ಕರಾವಳಿ ಉತ್ಸವದ ವೇದಿಕೆಯಲ್ಲಿ ಪ್ರದರ್ಶಿಸಲಾಗುವುದು ಎಂದರು. ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಮಂಗಳಗೌರಿ ಭಟ್, ಜಿಲ್ಲಾ ವಾರ್ತಾಧಿಕಾರಿ ಬಿ.ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳು ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಅತ್ಯಾಕರ್ಷಕವಾದ 50 ಕ್ಕೂ ಅಧಿಕ ಛಾಯಾಚಿತ್ರಗಳನ್ನು ಇಲ್ಲಿ ಪ್ರದರ್ಶನಕ್ಕಿಡಲಾಗಿದ್ದು, ಕರಾವಳಿ ಉತ್ಸವದ ಮುಕ್ತಾಯದವರೆಗೂ ಸಾರ್ವಜನಿಕರು ಉಚಿತವಾಗಿ ಈ ಪ್ರದರ್ಶನ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 