ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸುವಂತೆ ಜಿಲ್ಲಾಧಿಕಾರಿ ಸೂಚನೆ

ಧಾರವಾಡ01: ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಪೂರೈಕೆ  ನೀತಿಯ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಗೆ ಪ್ರತಿದಿನ ಕನಿಷ್ಟ 55 ಲೀಟರ್ ನೀರು ಅಗತ್ಯವಿದೆ. ಈ ಪ್ರಮಾನದ ನೀರಿನ ಸೌಲಭ್ಯವಿರದ ಗ್ರಾಮಗಳಿಗೆ ತಕ್ಷಣದಿಂದಲೇ ಟ್ಯಾಂಕರ್ಗಳ ಮೂಲಕ ಕುಡಿಯುವ ನೀರು ಪೂರೈಸಬೇಕು. ಹೆಚ್ಚು ಜಲಮೂಲ ಇರುವ ಕೊಳವೆಬಾವಿಗಳನ್ನು ಬಾಡಿಗೆ ಪಡೆದು ಸಾರ್ವಜನಿಕರಿಗೆ ನೀರು ಒದಗಿಸಬೇಕು. ಮೇವು ಮತ್ತು ಕೊಳವೆಬಾವಿಗಳ ಬಾಕಿ ಮೊತ್ತವನ್ನು ವಿಳಂಬ ಮಾಡದೇ ಪಾವತಿ ಮಾಡಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದರು.

ಜೂನ್ 12 ಹಾಗೂ 13 ರಂದು ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಣಾಧಿಕಾರಿಗಳ ವಿಶೇಷ ಸಮ್ಮೇಳನ ಏರ್ಪಡಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

   ಎನ್ಆರ್ಡಿಡಬ್ಲೂಪಿ ಮಾರ್ಗಸೂಚಿಯಂತೆ ಪ್ರತಿ ವ್ಯಕ್ತಿಗೆ ಪ್ರತಿ ದಿನ ಕನಿಷ್ಠ 55 ಲೀಟರ್ ನೀರು ಅಗತ್ಯವಿದೆ. ಜಿಲ್ಲೆಯಲ್ಲಿ 35 ಎಲ್ಪಿಸಿಡಿ ಪ್ರಮಾಣದಲ್ಲಿ ನೀರು ಪೂರೈಕೆ ಆಗುತ್ತಿರುವ ಗ್ರಾಮಗಳನ್ನು ಪಟ್ಟಿ ಮಾಡಿ ಅವುಗಳಿಗೆ ಟ್ಯಾಂಕರ್ ಅಥವಾ ಪಯರ್ಾಯ ಮೂಲಗಳ ಮೂಲಕ ನೀರು ಪೂರೈಸಬೇಕು ಎಂದು ಸೂಚಿಸಿದರು. 

ಜಿಲ್ಲೆಯಲ್ಲಿ ಒಟ್ಟು 388 ಜನವಸತಿಗಳು ಇವೆ. ಅವುಗಳಲ್ಲಿ 72 ಗ್ರಾಮಗಳಿಗೆ ಮಲಪ್ರಭಾ ಬಲದಂಡೆ ಕಾಲುವೆಯ ಮೂಲಕ ಪಡೆದಿರುವ ನೀರನ್ನು ಪೂರೈಸಲಾಗುತ್ತಿದೆ. 9 ಹಳ್ಳಿಗಳು ತೀವ್ರ ಸಂಕಷ್ಟದಲ್ಲಿವೆ. 27 ಕೊಳವೆಬಾವಿಗಳನ್ನು ಬಾಡಿಗೆ ಪಡೆಯಲಾಗಿದೆ. ಮೇ 25 ರ ವರೆಗೆ ಎಲ್ಲ ಬಾಡಿಗೆ ಮೊತ್ತವನ್ನು ಪಾವತಿಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿವರ್ಾಹಕ ಇಂಜಿನೀಯರ್ ರಾಜಶೇಖರ್ ಮುನವಳ್ಳಿ ಸಭೆಗೆ ಮಾಹಿತಿ ನೀಡಿದರು.

ಮುಂಗಾರು ಹಂಗಾಮಿಗೆ ಬೀಜ, ರಸಗೊಬ್ಬರ ದಾಸ್ತಾನು, ಇನ್ಪುಟ್ ಸಬ್ಸಿಡಿಯ ಪಾವತಿ, ಸಾಮಾಜಿಕ ಭದ್ರತಾ ಯೋಜನೆಗಳಲ್ಲಿನ ಫಲಾನುಭವಿಗಳಿಗೆ ಆಧಾರ ಸಂಪರ್ಕ ಕಲ್ಪಿಸಬೇಕು. 94 ಸಿ ಮತ್ತು 94 ಸಿಸಿ ಅಡಿ ಬಾಕಿ ಇರುವ ಅಕ್ರಮ ಸಕ್ರಮ ಯೋಜನೆಯ ಕಾರ್ಯಗಳನ್ನು ಪೂರ್ಣಗೊಳಿಸಬೇಕು. 

 ಅರಣ್ಯ ಹಕ್ಕು ಕಾಯ್ದೆಯಡಿ ಗ್ರಾಮಮಟ್ಟದ ಸಮಿತಿಗಳ ಪುನರ್ರಚನೆ ಆಗಬೇಕು. ಪರಿಶಿಷ್ಠ ಜಾತಿ ಪರಿಶಿಷ್ಠ ಪಂಗಡದ ಸ್ಮಶಾನ ಭೂಮಿ ಅಭಿವೃದ್ಧಿ, ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿ, ಮಾತೃಪೂರ್ಣ, ಮಾತೃಶ್ರೀ, ಅನ್ನಭಾಗ್ಯ, ಅನಿಲ ಭಾಗ್ಯ ಹಾಗೂ ನಗರೋತ್ಥಾನ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಮಾಹಿತಿಯನ್ನು ನಿಗದಿತ ಮಾದರಿಯಲ್ಲಿ ಹಾಗೂ ಸೂಕ್ತ ಟಿಪ್ಪಣಿಯೊಂದಿಗೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕೂಡಲೇ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು. 

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಪ್ರಶಾಂತಕುಮಾರ್ ಮಿಶ್ರಾ, ಅಪರ ಜಿಲ್ಲಾಧಿಕಾರಿ ಡಾ: ಸುರೇಶ್ ಇಟ್ನಾಳ, ಉಪವಿಭಾಗಾಧಿಕಾರಿ ಮಹಮ್ಮದ್ ಜುಬೇರ್, ಉಪಅರಣ್ಯ ಸಂರಕ್ಷಣಾಧಿಕಾರಿ ಮಹೇಶ್ಕುಮಾರ್ ಸೇರಿದಂತೆ ಜಿಲ್ಲೆಯ ಎಲ್ಲ ತಹಶೀಲ್ದಾರರು, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.