ಲಕ್ನೋ, ಆಗಸ್ಟ್ 24 ಮಂದಗತಿಯ ಆಥರ್ಿಕತೆ ಸರಿಪಡಿಸಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅನೇಕ ಬಗೆಯ ಕಸರತ್ತು ಮಾಡುತ್ತಿರುವ ಸಮಯದಲ್ಲೇ ದೇಶದ ಆರ್ಥಿಕ ಪರಿಸ್ಥಿತಿ ಬಹಳ ಸದೃಢವಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಮಂಗದತಿಯ ಆರ್ಥಿಕತೆ ಕೇವಲ ಭಾರತಕ್ಕೆ ಮಾತ್ರವಲ್ಲ ಇದು ವಿಶ್ವವ್ಯಾಪಿಯಾಗಿದೆ. ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಹಿಂಜರಿತ ಭೇದಿಸಿ ಹೊಸ ಘೋಷಣೆ ಮಾಡಿದ ಒಂದು ದಿನದ ನಂತರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಯೋಗಿ ಅವರು, ಪ್ರಧಾನಿ ನರೇಂದ್ರಮೋದಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಕೈಗೊಂಡಿರುವ ಉಪಕ್ರಮ ಅಭಿವೃದ್ಧಿ ಮತ್ತು ಬೆಳವಣಿಗೆಯೊಂದಿಗೆ ರಾಜಿ ಮಾಡಿಕೊಳ್ಳದೆ ಹಣಕಾಸು ವಿವೇಕ ಕಾಪಾಡಿಕೊಂಡಿದೆ ಎಂದು ಹೇಳಿದ್ದಾರೆ. ಅಂತಾರಾಷ್ಟ್ರಿಯ ಮಟ್ಟದಲ್ಲಿ ಆರ್ಥಿಕತೆ ಮಂದಗತಿಯಲ್ಲಿ ಸಾಗಿದ್ದರೂ ಅದರ ಹೊರತಾಗಿಯೂ ಭಾರತದ ಆರ್ಥಿಕ ಪರಿಸ್ಥಿತಿ ಸದೃಢವಾಗಿ, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ. ಯುಪಿ ಸರ್ಕಾರವು 2024 ರ ವೇಳೆಗೆ ರಾಜ್ಯದ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ತಲುಪುವುದಾಗಿ ಘೋಷಿಸಿತ್ತು ಮತ್ತು ಹೀಗಾಗಿ ಹೂಡಿಕೆ ಆಹ್ವಾನಿಸುವ ಮೂಲಕ ರಾಜ್ಯದ ಆಥರ್ಿಕತೆಗೆ ಹೆಚ್ಚಿನ ವೇಗ ಕೊಡಲು ಸರಕಾರ ಹಲವು ಪೂರಕ ಕ್ರಮ ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ.