ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ

ಮೃತ ರೈತ ಸಿದ್ದಭೀರಪ್ಪಲಕ್ಷ್ಮಣ ಪೂಜೇರ

ಯರಗಟ್ಟಿ 26: ಸಾಲಭಾದೆ ತಾಳಲಾರದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಸತ್ತಿಗೇರಿ ಗ್ರಾಮದಲ್ಲಿ ನಡೆದಿದೆ. 

ಸಿದ್ದಭೀರಪ್ಪಲಕ್ಷ್ಮಣ ಪೂಜೇರ (58) ಮೃತ ದುರ್ದೈವಿ. ಇವರು ಸತ್ತಿಗೇರಿ ಗ್ರಾಮದವರಾಗಿದ್ದರು. 2 ಎಕರೆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದ ಇವರಿಗೆ ಬ್ಯಾಂಕ್ ಹಾಗೂ ಕೈಸಾಲ ಸೇರಿ 8 ಲಕ್ಷ 90 ಸಾವಿರ ರೂ. ಸಾಲ ಮಾಡಿಕೊಂಡಿದ್ದರು. ಅದನ್ನು ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.ಈ ಕುರಿತು ಯರಗಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.