ನದಿಗೆ ಮೀನು ಹಿಡಿಯಲು ತೆರಳಿದ್ದ ತಂದೆ, ಇಬ್ಬರು ಮಕ್ಕಳು ನೀರು ಪಾಲು

ಬೆಳಗಾವಿ : ಘಟಪ್ರಭಾ ನದಿಗೆ ಮೀನು ಹಿಡಿಯಲು ತೆರಳಿದ್ದ ತಂದೆ ಮತ್ತು ಇಬ್ಬರು ಮಕ್ಕಳು ನಾಪತ್ತೆಯಾಗಿರುವ ಘಟನೆ ರವಿವಾರ ತಡ ರಾತ್ರಿ ನಡೆದಿರುವದು ವರದಿಯಾಗಿದೆ.

 ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಬಳಿಯ ಘಟಪ್ರಭಾ ನದಿ ಹಿನ್ನಿರಿನಲ್ಲಿ ಮೀನು ಹಿಡಿಯಲು ತೆರಳಿದ್ದ ತಂದೆ ಮತ್ತು ಇಬ್ಬರು ಮಕ್ಕಳು ನೀರು ಪಾಲಾಗಿರುವ ಭೀಕರ ದುರ್ಘಟನೆ ಸೋಮವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

   ಬೆನಕನಹೊಳಿ ಗ್ರಾಮದ ಲಕ್ಷ್ಮಣ ರಾಮ ಅಂಬಲಿ (49)ಮತ್ತು ಅವರ ಮಕ್ಕಳಾದ ರಮೇಶ (14), ಯಲ್ಲಪ್ಪ (12) ಮೃತ ಪಟ್ಳಲ . ಲಕ್ಷ್ಮಣ ಹಾಗೂ ಅವರ ಮಕ್ಕಳು ರವಿವಾರ ಸಂಜೆ ಬೈಕ್ ನಿಲ್ಲಿಸಿ ಮೀನು ಹಿಡಿಯಲು ನದಿಯ ನೀರಿಗೆ ಇಳಿದಿದ್ದರು.

    ಸೋಮವಾರ ಬೆಳಗ್ಗೆ ವರೆಗೂ ಮನೆಗೆ ವಾಪಸ್ಸು ಬಾರದೇ ಇರುವುದರಿಂದ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಆಗ ಈ ರ್ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಎನ್ ಡಿ ಆರ್ ಎಫ್ ತಂಡ ಹಾಗೂ ಯಮಕನಮರಡಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಯಮಕನಮರಡಿ ಸಿಪಿಐ ಜಾವೀದ್ ಮುಷಾಪುರೆ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ತಂದೆ ಮಕ್ಕಳ ಶೋಧ ಕಾರ್ಯ ನಡೆಸುತ್ತಿದ್ದಾರೆ‌.