ನವದೆಹಲಿ, ಜನವರಿ 28, ದೆಹಲಿಯ ಡಾ ರಾಮ ಮನೋಹರ್ ಲೋಹಿಯಾ ಆಸ್ಪತ್ರೆ (ಆರ್ಎಂಎಲ್) ಸೇರಿರುವ ಮೂವರು ಶಂಕಿತರಿಗೆ ಕರೋನ ವೈರಸ್ ಸೋಂಕು ತಗಲಿರುವುದು ಪತ್ತೆಯಾಗಿದೆ.ಮೂವರ ರಕ್ತದ ಮಾದರಿಗಳನ್ನು ಪರೀಕ್ಷೆಗಾಗಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರಕ್ಕೆ ಕಳುಹಿಸಲಾಗಿದೆ ಎನ್ನಲಾಗಿದೆ. ಚೀನಾದಲ್ಲಿ ಕರೋನ ವೈರಸ್ ನಿಂದ ಮೃತಪಟ್ಟವರ ಸಸತತವಾಗಿ ಏರಿಕೆ ಯಾಗುತ್ತಲೇ ಸುಮಾರು 1,300 ಹೊಸ ಪ್ರಕರಣಗಳು ಪತ್ತೆಯಾಗಿವೆ.ಇದುವರೆಗೆ 4,ಸಾವಿರ ಕ್ಕೂ ಹೆಚ್ಚು ಜನರು ಕರೋನ ವೈರಸ್ ಸೋಂಕಿಗೆ ಒಳಗಾಗಿದ್ದಾರೆ. ಭಾರತೀಯ ರಾಜತಾಂತ್ರಿಕರು ಚೀನಾದಿಂದ ಭಾರತೀಯರನ್ನು ಸ್ಥಳಾಂತರ ಮಾಡುವ ಕುರಿತು ಸೋಮವಾರ ಚೀನಾದ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎಂದೂ ಭಾರತೀಯ ರಾಯಭಾರ ಕಚೇರಿ ಮೂಲಗಳು ಹೇಳಿವೆ.