‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ ಮನರಂಜನೆಯೊಂದಿಗೆ ಉತ್ತಮ ಸಂದೇಶ ಸಾರಲಿದೆ
The film ‘Sarkari Nyayabele Angadi’ will convey a good message along with entertainment
ಕೊಪ್ಪಳ, ಆ. 3: ದೇಶದಲ್ಲಿಯೇ ಸರ್ಕಾರಿ ನ್ಯಾಯಬೆಲೆ ಅಂಗಡಿ ಹಾಗೂ ಪಡಿತರ ವ್ಯವಸ್ಥೆಯನ್ನು ಕೇಂದ್ರವಾಗಿಟ್ಟುಕೊಂಡು ನಿರ್ಮಾಣವಾಗಿರುವ ಮೊದಲ ಕನ್ನಡ ಚಿತ್ರ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಎಂದು ಹಿರಿಯ ರಂಗಭೂಮಿ ಕಲಾವಿದ ಹಾಗೂ ನಟ ಹಾಲಯ್ಯ ಹುಡೇಜಾಲಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನರಂಜನೆಯೊಂದಿಗೆ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಉದ್ದೇಶದಿಂದ ಈ ಚಿತ್ರವನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.
ಚಿತ್ರದಲ್ಲಿ ನಟಿ ರಾಗಿಣಿ ದ್ವಿವೇದಿ, ನಟರಾದ ಕುಮಾರ ಬಂಗಾರ್ಪ, ದೊಡ್ಡಣ್ಣ, ನವೀನ್ ಸಜ್ಜು, ಕೃಷ್ಣಪ್ಪ ಸೇರಿದಂತೆ ಹಲವು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದು, ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಸಿನಿಮಾದ ಹೆಸರೇ ಸೂಚಿಸುವಂತೆ, ಸರ್ಕಾರಿ ನ್ಯಾಯಬೆಲೆ ಅಂಗಡಿ ಹಾಗೂ ಪಡಿತರ ವ್ಯವಸ್ಥೆಯ ಸುತ್ತ ಕಥಾಹಂದರ ಸಾಗುತ್ತದೆ. ಗ್ರಾಮೀಣ ಸೊಗಡಿನ ಈ ಚಿತ್ರದ ಸಂಪೂರ್ಣ ಚಿತ್ರೀಕರಣ ಮಂಡ್ಯ ಜಿಲ್ಲೆಯಲ್ಲಿ ನಡೆದಿದ್ದು, ಗ್ರಾಮೀಣ ಬದುಕಿನ ನೈಜ ಚಿತ್ರಣವನ್ನು ತೆರೆಗೆ ತರಲಾಗಿದೆ ಎಂದು ಹೇಳಿದರು. ‘ಜಯಶಂಕರ ಟಾಕೀಸ್’ ಬ್ಯಾನರ್ ಅಡಿಯಲ್ಲಿ ತೇಜು ಮೂರ್ತಿ ಹಾಗೂ ಪದ್ಮಾವತಿ ಚಂದ್ರಶೇಖರ್ ಜಂಟಿಯಾಗಿ ಚಿತ್ರವನ್ನು ನಿರ್ಮಿಸಿದ್ದಾರೆ.
ಚಿತ್ರದಲ್ಲಿ ಪಾರ್ವತಿ ಎಂಬ ಗ್ರಾಮೀಣ ಮಹಿಳೆಯ ಪಾತ್ರದಲ್ಲಿ ನಟಿಸಿರುವ ರಾಗಿಣಿ ದ್ವಿವೇದಿ, ಮೊದಲ ಬಾರಿಗೆ ಅಪ್ಪಟ ಹಳ್ಳಿ ಮಹಿಳೆಯ ಪಾತ್ರದಲ್ಲಿ ಅಭಿನಯಿಸುವ ಅವಕಾಶ ದೊರೆತಿರುವುದು ವಿಶೇಷ ಅನುಭವವಾಗಿದೆ. ಸಂಪೂರ್ಣ ಚಿತ್ರೀಕರಣ ಗ್ರಾಮೀಣ ಪ್ರದೇಶದಲ್ಲೇ ನಡೆದಿದ್ದು, ಈ ಸಿನಿಮಾ ಪ್ರೇಕ್ಷಕರಿಗೆ ಮನರಂಜನೆಯ ಜೊತೆಗೆ ಉತ್ತಮ ಸಾಮಾಜಿಕ ಸಂದೇಶವನ್ನೂ ನೀಡಲಿದೆ ಎಂದು ಹೇಳಿದ್ದಾರೆ.
ಕೊಪ್ಪಳ ಜಿಲ್ಲೆಯ ಸಿನಿಪ್ರೇಕ್ಷಕರು ಚಿತ್ರಮಂದಿರಗಳಿಗೆ ಆಗಮಿಸಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರವನ್ನು ವೀಕ್ಷಿಸಿ ಪ್ರೋತ್ಸಾಹಿಸಬೇಕು ಎಂದು ನಟ ಹಾಲಯ್ಯ ಹುಡೇಜಾಲಿ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಬಸವರಾಜ ಗಿಣಿಗೇರ ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 