ಕೊರೋನಾ; ಕಾಂಗ್ರೆಸ್ ಕಾರ್ಯಪಡೆ ಮೊದಲ ಸಭೆ ಇಂದು

ಬೆಂಗಳೂರು,‌ ಮಾ  31,ಕೊರೋನಾ ಸೋಂಕು ನಿಯಂತ್ರಣ ಹಾಗೂ ಪರಿಸ್ಥಿತಿ ನಿರ್ವಹಣೆಗೆ ರಚಿಸಲಾಗಿರುವ  ಕಾಂಗ್ರೆಸ್ ಕಾರ್ಯಪಡೆಯ ಮೊದಲ ಸಭೆ ಮಾ.31 ರಂದು ಮಂಗಳವಾರ  ನಡೆಯಲಿದೆ.ಬೆಂಗಳೂರಿನ  ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಕೆಪಿಸಿಸಿ  ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ  ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್ ಪಾಟೀಲ್, ಕೆಪಿಸಿಸಿ  ಕಾರ್ಯಾಧ್ಯಕ್ಷರುಗಳು, ಕಾರ್ಯಪಡೆಯ ಮುಖ್ಯಸ್ಥರು ಹಾಗೂ ಸದಸ್ಯರುಗಳು  ಭಾಗವಹಿಸಲಿದ್ದಾರೆ.